ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. 

Last Updated : Oct 8, 2018, 05:52 PM IST
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ title=
File Image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಸೃಷ್ಠಿಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ಸಮಯದಲ್ಲಿ ಅರಬ್ಬಿ ಸಮುದ್ರದಲ್ಲಿ ಸಹ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ, ಬೆಂಗಳೂರು ಸೇರಿದಂತೆ ಒಳನಾಡಿನ ಅಲ್ಲಲ್ಲಿ ಸತತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಎರಡರಲ್ಲೂ ವಾಯುಭಾರ ಕುಸಿತ ಉಂಟಾಗಿರುವ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಚಂಡಮಾರುತ ಬೀಸಲಿದೆ. ಅಂಡಮಾನ್​ ದ್ವೀಪದಲ್ಲಿ ಈ ಪ್ರಮಾಣ ಗಂಟೆಗೆ 60 ಕಿ.ಮೀ. ವೇಗದಲ್ಲಿರಲಿದೆ. ಹೀಗಾಗಿ, ಮೀನುಗಾರರು ಸಮುದ್ರದ ಕಡೆಗೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಏತನ್ಮಧ್ಯೆ, ಕೊಡಗಿನ ವಿವಿಧೆಡೆ ಮಧ್ಯಾಹ್ನದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. 

Trending News