)
ಹುಬ್ಬಳ್ಳಿ: ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಗಂಭೀರವಾಗಿ ಸುಟ್ಟ ಗಾಯಗೊಂಡಿದ್ದರು.
ಹುಬ್ಬಳ್ಳಿ ನಗರದ ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಕ್ತಿ ನಗರದಲ್ಲಿರುವ ಮನೆಯೊಂದರಲ್ಲಿ ಬುಧವಾರ ರಾತ್ರಿ ನಡೆದ ಸಿಲಿಂಡರ್ ಸ್ಫೋಟದಿಂದಾಗಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಗಂಭೀರವಾಗಿ ಸುಟ್ಟ ಗಾಯಗೊಂಡಿದ್ದರು, ಗಾಯಗೊಂಡವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ದೈಹಿಕ ಶಿಕ್ಷಕಿ ಗಂಗಮ್ಮ ಬಳ್ಳಾರಿ (ವಯಸ್ಸು 38) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಗಂಗಮ್ಮ ಪತಿ ಮಹಾಂತೇಶ ಬಳ್ಳಾರಿ ಹಾಗೂ ಮಕ್ಕಳಾದ ಮನೋರಂಜನ್ ಮತ್ತು ಕಾರುಣ್ಯಗೂ ತೀವ್ರ ಸುಟ್ಟ ಗಾಯಗಳಾಗಿವೆ. ಮೂವರಿಗೂ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.