Karnataka CM Race: ಬಹುಮತದಿಂದ ಗೆಲ್ಲಿಸಿದ್ದಾರೆ ಇದಕ್ಕಿಂತ ದೊಡ್ಡ ಉಡುಗೊರೆ ನಿರೀಕ್ಷಿಸಲು ಸಾಧ್ಯವೇ - ಡಿ.ಕೆ. ಶಿ
Karnataka CM Race: ವಿಧಾನ ಸಭೆ ಫಲಿತಾಂಶ ಬಂದು ಈಗಾಗಲೇ ಎರಡು ದಿನ ಕಳೆದಿದೆ. ಸಿಎಂ ಯಾರೆಂದು ಘೋಷಿಸಿಲ್ಲ ಇದರ ನಡುವೆ ಇದೀಗ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಒಪ್ಪಿಸಲಾಗಿದೆ.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆಯಲ್ಲಿ ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಿಧಾನ ಸಭೆ ಫಲಿತಾಂಶ ಬಂದು ಈಗಾಗಲೇ ಎರಡು ದಿನ ಕಳೆದಿದೆ. ಸಿಎಂ ಯಾರೆಂದು ಘೋಷಿಸಿಲ್ಲ.
ಪಕ್ಷ ಬೆಳೆಯುಸುವಲ್ಲಿ ಡಿಕೆ ಶಿವಕುಮಾರ್ ಪಾತ್ರ ಮುಖ್ಯವೋ ಹಾಗೆ ಈಬಾರಿ ಚುನಾವಣೆಯಲ್ಲಿ ಬಹುಮತ ಸಾಧಿಸುವಲ್ಲಿ ಸಿದ್ದರಾಮ್ಯರವರ ಅಷ್ಟೇ ಶ್ರಮ ವಹಿಸಿದ್ದಾರೆಂದು ಕೈ ಕಾರ್ಯಕರ್ತರು ಹೇಳುತ್ತಿದ್ದಾರೆ. ಇದರ ನಡುವೆ ಇದೀಗ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಒಪ್ಪಿಸಲಾಗಿದೆ ಎಂದರು.
ಇದನ್ನೂ ಓದಿ: CM Bommai : ಆರ್ ಎಸ್ ಎಸ್ ನಾಯಕರೊಂದಿಗೆ ಚುನಾವಣೆಯ ಫಲಿತಾಂಶದ ಕುರಿತು ಚರ್ಚೆ ನಡೆಸಿದ ಹಂಗಾಮಿ ಸಿಎಂ ಬೊಮ್ಮಾಯಿ!
ಇಂದು ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತಾನಾಡಿರುವ ಡಿಕೆಶಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ ಎಂದರು.
ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದಾರೆ.
ಇದನ್ನೂ ಓದಿ: Mangalore Assembly Constituency: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ!
ಹುಟ್ಟುಹಬ್ಬದ ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ ಉಡುಗೊರೆ ನೀಡುತ್ತದೆಯೋ ಇಲ್ಲವೋ, ಆದರೆ ರಾಜ್ಯದ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನ ಅಧ್ಯಕ್ಷತೆಯಲ್ಲಿ ಪಕ್ಷವನ್ನು 135 ಸ್ಥಾನಗಳ ಬಹುದೊಡ್ಡ ಬಹುಮತದಿಂದ ಗೆಲ್ಲಿಸಿದ್ದಾರೆ. ಇದಕ್ಕಿಂತ ದೊಡ್ಡ ಉಡುಗೋರೆ ನಿರೀಕ್ಷಿಸಲು ಸಾಧ್ಯವೇ? ಅಧಿಕಾರ ಇಲ್ಲದಿದ್ದರೂ, ಎಲ್ಲಾ ಕಿರುಕುಳ, ಸವಾಲುಗಳನ್ನು ಎದುರಿಸಿ, ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ ಎಂದು ತಿಳಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.