ರಾಜಕೀಯ ಬಿಕ್ಕಟ್ಟಿನ ನಡುವೆ ದೇವಗೌಡರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್

ರಾಜ್ಯದಲ್ಲಿನ 11 ಶಾಸಕರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಈ ವಿಚಾರವಾಗಿ ಚರ್ಚಿಸಲು ಸಚಿವ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾದರು.

Last Updated : Jul 7, 2019, 12:52 PM IST
ರಾಜಕೀಯ ಬಿಕ್ಕಟ್ಟಿನ ನಡುವೆ ದೇವಗೌಡರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿನ 11 ಶಾಸಕರು ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಈ ವಿಚಾರವಾಗಿ ಚರ್ಚಿಸಲು ಸಚಿವ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಎಚ್.ಡಿ.ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾದರು.

ಈಗ ಶಾಸಕರು ರಾಜಿನಾಮೆ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಆತಂಕ ಸೃಷ್ಟಿ ಮಾಡಿದೆ. ಈ ಹಿನ್ನಲೆಯಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುವ ವಿಚಾರವಾಗಿ ಸುದೀರ್ಘ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ಪ್ರಸ್ತಾಪವನ್ನು ಡಿಕೆಶಿ ದೇವೇಗೌಡರ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. 

ಇನ್ನೊಂದೆಡೆಗೆ ಈ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಯಡಿಯೂರಪ್ಪ ಅವರು,"ನಾನು ತುಮಕೂರಿಗೆ ಹೋಗುತ್ತಿದ್ದೇನೆ ಮತ್ತು ಸಂಜೆ 4 ಗಂಟೆಗೆ ಹಿಂತಿರುಗುತ್ತೇನೆ. ರಾಜಕೀಯ ಬೆಳವಣಿಗೆಗಳ ಬಗ್ಗೆ ನಿಮಗೆ ತಿಳಿದಿದೆ. ಈ ವಿಚಾರವಾಗಿ ಕಾಯ್ದು ನೋಡುತ್ತೇವೆ ಎಂದು ಹೇಳಿದ್ದಾರೆ.

ಶನಿವಾರದಂದು  ಜೆಡಿ (ಎಸ್) ಶಾಸಕ ಎಚ್ ವಿಶ್ವನಾಥ್ ಸೇರಿದಂತೆ 11 ಶಾಸಕರು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ ಮತ್ತು ಅವುಗಳನ್ನು ಸ್ವೀಕರಿಸುವಂತೆ ಮನವಿ ಮಾಡಿದ್ದಾರೆ .ಆದರೆ, ಸ್ಪೀಕರ್ ಇನ್ನೂ ಈ ರಾಜೀನಾಮೆಗಳನ್ನು ಸ್ವೀಕರಿಸಿಲ್ಲ ಎನ್ನಲಾಗಿದೆ.ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರಲ್ಲಿ  ಬಿ.ಸಿ.ಪಾಟೀಲ್, ಎಚ್ ವಿಶ್ವನಾಥ್, ನಾರಾಯಣ್ ಗೌಡ, ಎಸ್ ಹೆಬ್ಬಾರ್, ಮಹೇಶ್ ಕುಮತಳ್ಳಿ, ಗೋಪಾಲಯ, ರಮೇಶ್ ಜಾರ್ಕಿಹೋಳಿ, ಮತ್ತು ಪ್ರತಾಪ್ ಗೌಡ ಪಾಟೀಲ್ ಸೇರಿದ್ದಾರೆ.ಇವರು ಈಗ ಮುಂಬೈನ ಸೋಫಿಟೆಲ್ ಹೋಟೆಲ್‌ನಲ್ಲಿ ತಂಗಿದ್ದಾರೆ ಎನ್ನಲಾಗಿದೆ.

More Stories

Trending News