ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ!

ರಾಜ್ಯ ಸರ್ಕಾರಿ ನೌಕರರ ಮೂಲ ವೇತನದ ಶೇ.3.75ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 6.50ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

Last Updated : Mar 29, 2019, 06:16 AM IST
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ! title=

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ.2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜನವರಿ 1, 2019 ರಿಂದಲೇ ಅನ್ವಯವಾಗಲಿದೆ. ಈ ಮೂಲಕ ಮೂಲ ವೇತನದ ಶೇ.3.75ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 6.50ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದ ಸಹಾಯದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಹಾಗೂ ನಿವೃತ್ತಿ ಹೊಂದಿ ಪಿಂಚಣಿ ಪಡೆಯುತ್ತಿರುವವರಿಗೂ ಈ ಆದೇಶ ಅನ್ವಯವಾಗಲಿದೆ. 

ಈ ಹಿಂದೆ 2018ರ ಅಕ್ಟೋಬರ್ ನಲ್ಲಿ ಶೇ. 1.75ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 3.75ಕ್ಕೆ ಹೆಚ್ಚಿಸಿ ಜುಲೈ 1, 2018 ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸುಮಾರು ಆರು ತಿಂಗಳ ಅಂತರದಲ್ಲೇ ಮತ್ತೆ ತುಟ್ಟಿ ಭತ್ಯೆ ದರವನ್ನು ಪರಿಷ್ಕರಣೆ ಮಾಡಿರುವ ರಾಜ್ಯ ಸರಕಾರ ಶೇ. 3.75 ರಿಂದ ಶೇ. 6.50ಗೆ ಹೆಚ್ಚಿಸಿ ಜನವರಿ 1, 2019 ರಿಂದ ಅನ್ವಯವಾಗುವಂತೆ ಸರ್ಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಡಿ.ಎಸ್.ಜೋಗೋಜೆ ಆದೇಶ ಹೊರಡಿಸಿದ್ದಾರೆ.

Trending News