ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ; ಯಾವ ನೌಕರರಿಗೆ ಈ ಆದೇಶ ಅನ್ವಯ?

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜನವರಿ 1, 2019 ರಿಂದಲೇ ಅನ್ವಯವಾಗಲಿದೆ. 

Last Updated : Mar 28, 2019, 07:46 PM IST
ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ; ಯಾವ ನೌಕರರಿಗೆ ಈ ಆದೇಶ ಅನ್ವಯ? title=

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಜನವರಿ 1, 2019 ರಿಂದಲೇ ಅನ್ವಯವಾಗಲಿದೆ. ಈ ಮೂಲಕ ಮೂಲ ವೇತನದ ಶೇ.3.75ರಷ್ಟಿದ್ದ ತುಟ್ಟಿ ಭತ್ಯೆಯನ್ನು ಶೇ. 6.50ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ರಾಜ್ಯ ಸರ್ಕಾರದ ಯಾವ ನೌಕರರಿಗೆ ಈ ಆದೇಶ ಅನ್ವಯ

1.  ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದ ಸಹಾಯದಿಂದ ಸಹಾಯಾನುದಾನ ಪಡೆದು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯವಾಗಲಿದೆ. 

2. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ಸಂಚಿತ ನಿಧಿಯಿಂದ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರಿಗೆ ಈ ಆದೇಶ ಅನ್ವಯವಾಗಲಿದೆ. 

3. 2006ರ ಪರಿಷ್ಕೃತ ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿದ್ದ ಹಾಗೂ ದಿನಾಂಕ 1.1.2016ರ ಪೂರ್ವದಲ್ಲಿ ನಿವೃತ್ತರಾದ ಪಿಂಚಣಿದಾರರಿಗೆ ಈ ಆದೇಶ ಅನ್ವಯವಾಗಲಿದೆ.
 

Trending News