ಕಡಬ : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ್ದಾರೆ. ಪುತ್ತೂರು ಕಡಬ ಸಮೀಪದ ಎಡಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಂತು ಅಜಿಲ ಮೂಲಂಗೀರಿ ಮೃತಪಟ್ಟಿರುವ ದೈವ ನರ್ತಕ.
ಕರಾವಳಿ ಭಾಗದಲ್ಲಿ ಇದೀಗ ಜಾತ್ರೆ, ಕೋಲ, ನೇಮೋತ್ಸವದ ಸಮಯ. ಬಹುತೇಕ ಎಲ್ಲಾ ದೈವಸ್ಥಾನಗಳಲ್ಲಿ ಗಗ್ಗರ ಸೇವೆ ಅಥವಾ ಕೋಲ , ನೇಮ ನಡೆಯುತ್ತಿದೆ. ಇದೇ ರೀತಿ ಕಡಬ ಸಮೀಪದ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ನೇಮೋತ್ಸವ ನಡೆಯುತ್ತಿತ್ತು. ಈ ವೇಳೆ ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಎನ್ನುವವರು ನರ್ತನದಲ್ಲಿರುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇದನ್ನೂ ಓದಿ : "ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು"-ಯತ್ನಾಳ್
ಮೃತ ಪಟ್ಟಿರುವ ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಬಾರಿ ನಡೆಯುತ್ತಿದ್ದ ನೇಮೋತ್ಸವ ವೇಳೆ ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಏನೂ ಪ್ರಯೋಜನವಾಗಿಲ್ಲ. ಕಾಂತು ಅಜಿಲ ಮೂಲಂಗೀರಿ ಹೃದಯಾಘಾತಕ್ಕೆ ಒಳಗಾಗಿರಬಹುದೆಂದು ಅಂದಾಜಿಸಲಾಗಿದೆ. ಆದರೆ ಇಲ್ಲಿಯವರೆಗೆ ಈ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಇದನ್ನೂ ಓದಿ : ಕಾಂಗ್ರೆಸ್ ಪಕ್ಷದ 21 ವರ್ಷದ ತ್ರಿವೇಣಿ ಬಳ್ಳಾರಿ ಮೇಯರ್ ಆಗಿ ಆಯ್ಕೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.