ದಲಿತ ಸಿಎಂ ವಿಚಾರ: ಸಿದ್ದರಾಮಯ್ಯ ಮತ್ತು ಡಿಕೆಶಿ ನಿಲುವು ಪ್ರಶ್ನಿಸಿದ ಬಿಜೆಪಿ
ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೇ ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು? ಎಂದು ಬಿಜೆಪಿ ಪ್ರಶ್ನಿಸಿದೆ.
ಬೆಂಗಳೂರು: ದಲಿತ ಸಿಎಂ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿಲುವೇನು ಎಂದು ಬಿಜೆಪಿ ಪ್ರಶ್ನಿಸಿದೆ. ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ‘ಸಿಎಂ ಸ್ಥಾನಕ್ಕಾಗಿ ಹಗಲುಕನಸು ಕಾಣುತ್ತಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರೇ, ದಲಿತ ಸಿಎಂ ವಿಚಾರದಲ್ಲಿ ನಿಮ್ಮ ನಿಲುವೇನು?’ ಎಂದು ಪ್ರಶ್ನಿಸಿದೆ.
‘ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುಜ್ ಖರ್ಗೆ & ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ರಾಜಕೀಯ ಜೀವನವನ್ನು ಮುಗಿಸಿದ ರೀತಿಯಲ್ಲಿಯೇ ಕಾಂಗ್ರೆಸ್ ಪಕ್ಷದ ಅಂತರಾಳದಲ್ಲಿ ಹುಟ್ಟಿದ ದಲಿತ ಸಿಎಂ ವಾದದ ಭ್ರೂಣ ಹತ್ಯೆ ಮಾಡುತ್ತೀರಾ?’ ಎಂದು ಕಾಂಗ್ರೆಸ್ ನಾಯಕರಿಗೆ ವ್ಯಂಗ್ಯವಾಗಿ ಬಿಜೆಪಿ ಪ್ರಶ್ನಿಸಿದೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಸುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ: ಬಿ.ಎಸ್.ಯಡಿಯೂರಪ್ಪ
#DalitVirodhiCongress ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಪಂಜಾಬ್ ನೂತನ ಸಿಎಂ ರೀತಿಯಲ್ಲಿ ಮೈತ್ರಿ ಸರ್ಕಾರದಲ್ಲಿ ಜಿ.ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟಕಟ್ಟಿ, ನೈಟ್ ವಾಚ್‌ಮೆನ್ ಆಗಿ ಕಾಂಗ್ರೆಸ್ ಬಳಸಿಕೊಂಡಿತ್ತು. ಕೊನೆಗೆ ಸರ್ಕಾರ ಕೆಡವಿ ದಲಿತ ನಾಯಕರಿಗೆ ಸಿಕ್ಕ ಅಧಿಕಾರ ಕಸಿದುಕೊಂಡರು. ದಲಿತ ಸಿಎಂ ವಾದ ಗಟ್ಟಿಯಾಗಲು ಕಾಂಗ್ರೆಸ್ ಬಿಡುತ್ತದೆಯೇ? ರಾಜ್ಯದಲ್ಲಿ ದಲಿತ ಸಿಎಂ ವಾದ ಬುಗಿಲೆದ್ದಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ನಾನೇ ದಲಿತ ಪರವಾಗಿದ್ದೇನೆ. ಇನ್ಯಾಕೆ ದಲಿತ ಮುಖ್ಯಮಂತ್ರಿ ಎಂದು ಅವರು ಪ್ರಶ್ನಿಸಿದ್ದರು. ದಲಿತ ಮುಖ್ಯಮಂತ್ರಿ ವಾದಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಅಡ್ಡಿ ಯಾರೆಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ’ ಎಂದು ಬಿಜೆಪಿ ಕುಟುಕಿದೆ.
ಆನೇಕಲ್ ಬಳಿ ರೇವ್ ಪಾರ್ಟಿ: ಡ್ರಗ್ಸ್ ನಶೆಯಲ್ಲಿದ್ದ 11 ಮಂದಿ ಬಂಧನ..!
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.