ದಲಿತ ಮುಖಂಡ, ಪ್ರಗತಿಪರ ಹೋರಾಟಗಾರ ಲಕ್ಷ್ಮಿನಾರಾಯಣ ನಾಗವಾರ ನಿಧನ
Lakshmi Narayana Nagawara: ದಲಿತ ಚಳವಳಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ, ಡಾ.ಸಿದ್ದಲಿಂಗಯ್ಯ ಮತ್ತು ದೇವನೂರು ಮಹಾದೇವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಹಲವು ಹೋರಾಟಗಳನ್ನು ರೂಪಿಸಿ ಯಶಸ್ವಿಯಾಗಿ ನಡೆಸಿದ ಕೀರ್ತಿಗೆ ನಾಗವಾರ ಭಾಜನರಾಗಿದ್ದರು.
Lakshmi Narayana Nagawara passes away: ಕರ್ನಾಟಕ ದಲಿತ ಚಳವಳಿಯ ಹಿರಿಯ ಮುಖಂಡ ಲಕ್ಷ್ಮಿನಾರಾಯಣ ನಾಗವಾರ ಅವರು ಮಂಗಳವಾರ ಸಂಜೆ(ಡಿಸೆಂಬರ್ 31) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ, ಪ್ರಗತಿಪರ ಹೋರಾಟಗಾರ ಲಕ್ಷ್ಮಿನಾರಾಯಣ ನಾಗವಾರ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಕಳೆದ 2 ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರ ಆರೋಗ್ಯ ಕ್ಷೀಣಿಸುತ್ತಲೇ ಇತ್ತು. 2022ರ ಡಿಸೆಂಬರ್ 6ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ದಲಿತ ಸಾಂಸ್ಕೃತಿಕ ಪ್ರತಿರೋಧʼದಲ್ಲಿ ಭಾಗಿಯಾಗಿದ್ದೇ ಅವರ ಕೊನೆಯ ಕಾರ್ಯಕ್ರಮ.
ಇದನ್ನೂ ಓದಿ: ಪವಿತ್ರಾ ಗೌಡ ಪುತ್ರಿ ಖುಷಿ ಗೌಡ ಪೋಸ್ಟ್ ವೈರಲ್
ನಾಗವಾರ ಅವರಿಗೆ 58 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರಿಯರು ಸೇರಿದಂತೆ ಬಂಧು-ಮಿತ್ರರು ಹಾಗೂ ಸಂಘಟನೆಯ ಅಪಾರ ಸಂಖ್ಯೆ ಒಡನಾಡಿಗಳನ್ನು ಅಗಲಿದ್ದಾರೆ. ಬೆಂಗಳೂರು ನಗರದ ನಾಗವಾರ ಮೂಲದ ಲಕ್ಷ್ಮಿ ನಾರಾಯಣ ಅವರು, ವಿದ್ಯಾರ್ಥಿ ದೆಸೆಯಲ್ಲಿ ದಲಿತ ಚಳುವಳಿಯಲ್ಲಿ ಗುರುತಿಸಿಕೊಂಡಿದ್ದರು. ಪ್ರಗತಿಪರ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದ ಅಪರೂಪದ ವ್ಯಕ್ತಿತ್ವ ಅವರದ್ದಾಗಿತ್ತು.
ಬೆಂಗಳೂರಿನ ಕನಕ ನಗರದಲ್ಲಿ ವಾಸವಾಗಿದ್ದ ಲಕ್ಷ್ಮಿ ನಾರಾಯಣ ಅವರಿಗೆ ಮಂಗಳವಾರ ಬೆಳಗ್ಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಕೂಡಲೇ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: ಸಚಿನ್ ಆತ್ಮಹತ್ಯೆಯನ್ನು ಅಸ್ತ್ರವನ್ನಾಗಿ ಮಾಡಿಕೊಂಡ BJP ಪಡೆ
ದಲಿತ ಚಳವಳಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ, ಡಾ.ಸಿದ್ದಲಿಂಗಯ್ಯ ಮತ್ತು ದೇವನೂರು ಮಹಾದೇವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಹಲವು ಹೋರಾಟಗಳನ್ನು ರೂಪಿಸಿ ಯಶಸ್ವಿಯಾಗಿ ನಡೆಸಿದ ಕೀರ್ತಿಗೆ ನಾಗವಾರ ಭಾಜನರಾಗಿದ್ದರು. ದಸಂಸ ಸಾಮಾನ್ಯ ಕಾರ್ಯಕರ್ತನಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಅವರು, ತಾಲೂಕು, ಜಿಲ್ಲಾ, ವಿದ್ಯಾರ್ಥಿ, ಯುವಜನ ಸಂಘ ಸೇರಿದಂತೆ ರಾಜ್ಯ ಪದಾಧಿಕಾರಿಗಳಾಗಿಯೂ ಸೇವೆ ಸಲ್ಲಿಸಿದ್ದರು.
ನಾಗವಾರ ಅವರ ಅಂತ್ಯ ಸಂಸ್ಕಾರ ನಾಳೆ (ಜನವರಿ 1) ಮಧ್ಯಾಹ್ನ 3 ಗಂಟೆಗೆ ನಾಗವಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜ್ಯ ಸರ್ಕಾರಿ SC/ST ಸಮನ್ವಯ ಸಮಿತಿ ಅಧ್ಯಕ್ಷ ಡಿ.ಶಿವಶಂಕರ್, ದಸಂಸ ಮುಖಂಡರು ಸೇರಿದಂತೆ ಹಲವು ಗಣ್ಯರ ಸಂತಾಪ ಸೂಚಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.