ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿದ್ದSCSP-TSP ಯೋಜನೆಯ ಕ್ರಾಂತಿಕಾರಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರುವ ಮೂಲಕ ಪರಿಶಿಷ್ಟ ಪಂಗಡದ ‘ನವಶಕ್ತಿ ಸಮಾವೇಶ’ದ ಕಾಳಜಿ ಪ್ರಾಮಾಣಿಕವಾಗಿದೆ ಎನ್ನುವುದನ್ನು ಬಿಜೆಪಿ ಸಾಬೀತುಪಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.  


COMMERCIAL BREAK
SCROLL TO CONTINUE READING

#ದಲಿತವಿರೋಧಿಬಿಜೆಪಿ ಹ್ಯಾಶ್‍ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಬಿಜೆಪಿ ಸರ್ಕಾರದಿಂದ ದಲಿತರಿಗೆ ದ್ರೋಹವಾಗಿದೆ’ ಎಂದು ಕಿಡಿಕಾರಿದ್ದಾರೆ. ‘ರಾಜ್ಯದಲ್ಲಿ ಶೇ.24.1ರಷ್ಟಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಯೋಜನಾ ವೆಚ್ಚದ ಶೇ.24.1ರಷ್ಟು ಹಣವನ್ನು ಕಾನೂನುಬದ್ಧವಾಗಿ ಮೀಸಲಿಟ್ಟಿದ್ದು ನಮ್ಮ ಬದ್ದತೆ. ನಿಮ್ಮ ಬದ್ದತೆ ಏನು? ಭಾಷಣಗಳ ಸಮಾವೇಶವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ವೋಟರ್ ಗೇಟ್ ಹಗರಣ ಕಿಂಗ್ ಪಿನ್ ಸಿಎಂ ಬೊಮ್ಮಾಯಿ ತಕ್ಷಣ ರಾಜೀನಾಮೆ ನೀಡಲಿ; ಕಾಂಗ್ರೆಸ್ ಆಗ್ರಹ 


Mangaluru Blast: ರಾಜ್ಯ ಗುಪ್ತಚರ ವಿಭಾಗ & ಗೃಹ ಇಲಾಖೆಯ ವೈಫಲ್ಯ ಮತ್ತೊಮ್ಮೆ ಸಾಬೀತಾಗಿದೆ


‘ಕಳೆದ 4 ವರ್ಷಗಳ ಅವಧಿಯಲ್ಲಿ SCSP-TSP ಯೋಜನೆಗೆ ಮೀಸಲಿರಿಸಿದ್ದ ಹಣದಲ್ಲಿ 7885.32 ಕೋಟಿ ರೂ.ವನ್ನು ನೀರಾವರಿ, ನಗರಾಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ವ್ಯಯ ಮಾಡಿರುವ ಬಿಜೆಪಿ ಸರ್ಕಾರ ದಲಿತ ಸಮುದಾಯದ ಬೆನ್ನಿಗೆ ಇರಿದಿದೆ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.