ದಸರಾ ಹಬ್ಬ: ಶಾಲೆಗಳಿಗೆ 4 ದಿನ ಹೆಚ್ಚುವರಿ ರಜೆ ಘೋಷಣೆ
ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 1ರವರೆಗೆ ಹೆಚ್ಚುವರಿ ರಜೆಗಳನ್ನು ಘೋಷಿಸಲಾಗಿದೆ.
ಮಂಗಳೂರು (ದಕ್ಷಿಣ ಕನ್ನಡ): ನಾಡಹಬ್ಬ ದಸರಾ ಹಿನ್ನೆಲೆ ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 28ರಿಂದ ಅನ್ವಯಗೊಂಡಂತೆ ಅಕ್ಟೋಬರ್ 1ರವರೆಗೆ ಹೆಚ್ಚುವರಿ 4 ದಿನಗಳ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 16ರವರೆಗೆ ರಜೆಯನ್ನು ನಿಗದಿಪಡಿಸಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 26ರಿಂದ ಆರಂಭಗೊಳ್ಳುವ ಮಂಗಳೂರು ದಸರಾ ಹಬ್ಬದ ಹಿನ್ನೆಲೆ ಸೆ.26ರಿಂದಲೇ ರಜೆ ನೀಡುವಂತೆ ಪೋಷಕರು, ಜನಪ್ರತಿನಿಧಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಇದನ್ನೂ ಓದಿ: ರಾಜ್ಯದ ಜನತೆಗೆ ಕರೆಂಟ್ ಶಾಕ್ : 'ಯೂನಿಟ್ʼಗೆ 24 ರಿಂದ 43 ಪೈಸೆ ವಿದ್ಯುತ್ ದರ ಏರಿಕೆ
ಇದಕ್ಕೆ ಶಿಕ್ಷಣ ಸಚಿವರು ಪೂರಕವಾಗಿ ಸ್ಪಂದಿಸಿದ್ದರೂ ಸಹ ಇದೀಗ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಇದರನ್ವಯ ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 1ರವರೆಗೆ ಹೆಚ್ಚುವರಿ ರಜೆಗಳನ್ನು ಘೋಷಿಸಲಾಗಿದೆ.
ಅಕ್ಟೋಬರ್ 2ರ ರವಿವಾರ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಕಡ್ಡಾಯವಾಗಿ ಸೂಚಿಸಿದೆ. ವಿದ್ಯಾರ್ಥಿಗಳಿಗೆ ನೀಡಲಾದ ಈ 4 ಹೆಚ್ಚುವರಿ ರಜೆಗಳನ್ನು ನವೆಂಬರ್ ತಿಂಗಳಿನ 4 ಶನಿವಾರ ಪೂರ್ಣ ದಿನದ ತರಗತಿ ಮತ್ತು 2 ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 70 ಲಕ್ಷ ರೂ. ಕಾಣಿಕೆ ಸಂಗ್ರಹ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.