ದಾಸರಹಳ್ಳಿ ವಲಯ: ವಿವಿಧ ಸ್ಥಳಗಳ ಪರಿಶೀಲನೆ ನಡೆಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಯಲಹಂಕ ವಲಯ ದಾಸರಹಳ್ಳಿ ಮುಖ್ಯ ರಸ್ತೆ(ಅಮೃತ ನಗರ ರಸ್ತೆ) 2.5 ಕಿ.ಮೀ ಇದ್ದು, ಈ ರಸ್ತೆಯನ್ನು ಅಮೃತ ನಗರೋತ್ಥಾನ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Written by - Manjunath Hosahalli | Edited by - Chetana Devarmani | Last Updated : Jan 24, 2023, 08:59 PM IST
  • ಯಲಹಂಕ ವಲಯ ದಾಸರಹಳ್ಳಿ ಮುಖ್ಯ ರಸ್ತೆ
  • ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲು ಸೂಚನೆ
  • ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ
ದಾಸರಹಳ್ಳಿ ವಲಯ: ವಿವಿಧ ಸ್ಥಳಗಳ ಪರಿಶೀಲನೆ  ನಡೆಸಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ title=
ತುಷಾರ್ ಗಿರಿನಾಥ್

ಬೆಂಗಳೂರು: ಯಲಹಂಕ ವಲಯ ದಾಸರಹಳ್ಳಿ ಮುಖ್ಯ ರಸ್ತೆ(ಅಮೃತ ನಗರ ರಸ್ತೆ) 2.5 ಕಿ.ಮೀ ಇದ್ದು, ಈ ರಸ್ತೆಯನ್ನು ಅಮೃತ ನಗರೋತ್ಥಾನ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ದಾಸರಹಳ್ಳಿ ಮುಖ್ಯ ರಸ್ತೆಯಲ್ಲಿ ಮಳೆ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ಸಲುವಾಗಿ 650 ಮೀಟರ್ ಉದ್ದದ  600 ಎಂ.ಎಂ ಪೈಪ್ ಲೈನ್ ಅಳವಡಿಸುವ ಕಾಮಗಾರಿಯನ್ನು ಕೂಡಲೆ ಪ್ರಾರಂಭಿಸಲು ಮತ್ತು  ಡಾಂಬರೀಕರಣ, ರಸ್ತೆ ಬದಿಯ ಚರಂಡಿ ಅಭಿವೃದ್ಧಿ, ಪಾದಚಾರಿ ಮಾರ್ಗ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುಣಮಟ್ಟವನ್ನು ಕಾಪಾಡಿಕೊಂಡು ಕೆಲಸ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ತಾಕತ್ ಇದ್ದರೆ ನನ್ನ ವಿರುದ್ಧದ ಆರೋಪದ ಬಗ್ಗೆ ತನಿಖೆ ನಡೆಸಿ: ಮಾಜಿ ಸಿಎಂ ಸಿದ್ದರಾಮಯ್ಯ

ರಸ್ತೆ ಬದಿಯ ಚರಂಡಿಗಳಲ್ಲಿ‌ ತುಂಬಿರುವ ಹೂಳನ್ನು ತೆರವುಗೊಳಿಸಬೇಕು. ಪಾದಚಾರಿ ಮಾರ್ಗದ ಸ್ಲ್ಯಾಬ್ ಹಾಳಾಗಿದ್ದು, ಹೊಸದಾಗಿ ಸ್ಲ್ಯಾಬ್ ಗಳನ್ನು ಅಳವಡಿಸಬೇಕು.  ಜೊತೆಗೆ ಪಾದಚಾರಿ ಮಾರ್ಗಗಳಲ್ಲಿ ಬರುವ ವಿದ್ಯುತ್ ಕಂಬಗಳಿಂದ ಪಾದಚಾರಿಗಳಿಗೆ ತೊಂದರೆಯಾಗದಂತಿರಬೇಕು ಹಾಗೂ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವಂತೆ ನೋಡಿಕೊಳ್ಳಬೇಕು ಸೂಚಿಸಿದರು‌.

ರಸ್ತೆ ಬದಿ ಕಸದ ಟ್ರಾನ್ಸ್ ಫರ್ ಸ್ಟೇಷನ್ ಇದ್ದು, ಅದರ ಸುತ್ತಲೂ ಶೀಟ್ ಗಳನ್ನು ಅಳವಡಿಸಿಕೊಂಡು ಸುತ್ತಮುತ್ತಲಿನ ಪ್ರದೇಶಕ್ಕೆ ವಾಸನೆ ಬರದಂತೆ ಸೂಕ್ತ ವ್ಯವಸ್ಥೆ ಮಾಡಿಕೊಂಡು ಕಸ ವಿಲೇವಾರಿ ಮಾಡಲು ಘನತ್ಯಾಜ್ಯ ವಿಭಾಗದ ಅಧಿಕಾರಿಗೆ ಹೇಳಿದರು.

ಅಮೃತನಗರ ಮುಖ್ಯ ರಸ್ತೆ ಭಾಗದಲ್ಲಿ ಜಲಮಂಡಳಿಯ ಕಂಟ್ರೋಲ್ ವಾಲ್ ಇದ್ದು, ಅದನ್ನು ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತೆ ಬದಲಿಸಲು ಜಲಮಂಡಳಿ ಅಧಿಕಾರಿಗಳಿಗೆ ತಿಳಿಸಿದರು. ಇದೇ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳು ರಸ್ತೆ ಬದಿ ಹಾಕಿದ್ದು, ಅದನ್ನು ತೆರವುಗೊಳಿಸಿ ಸಂಬಂಧಪಟ್ಟವರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ : ʼಬಿಜೆಪಿಗರದ್ದು ಪ್ರತಿಯೊಂದನ್ನು ನಾವು ಬಿಚ್ಚಿಟ್ಟಿದ್ದೀವಲ್ಲ..ʼ : ಡಿಕೆಶಿ

ಅಮೃತಹಳ್ಳಿ ಪೊಲೀಸ್ ಠಾಣೆ ಮುಂಭಾಗ ವಾಹನಗಳು ಪಾರ್ಕಿಂಗ್ ಮಾಡಬಾರದೆಂದು ಬ್ಯಾರಿಕೆಡ್ ಅಳವಡಿಸಿದ್ದು, ಅದನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಿ. ಏನಾದರು ವಾಹನಗಳು ನಿಲ್ಲಿಸಿದರೆ ಸಂಬಂಧಪಟ್ಟ ಮಾಲೀಕರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ರಸ್ತೆ ಬದಿ ವಾಹಗಳನ್ನು ನಿಲ್ಲಿಸಿದಂತಹವರಿಗೆ ಎಚ್ಚರಿಕೆ ನೀಡಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಸರಹಳ್ಳಿ ಮುಖ್ಯ ರಸ್ತೆ ಭುವನೇಶ್ವರಿ ನಗರದಲ್ಲಿ ಪಾದಚಾರಿ ಮಾರ್ಗದಲ್ಲಿ ಎಲ್ಲೆಲ್ಲಿ ಒತ್ತುವರಿ ಮಾಡಿಕೊಂಡಿದ್ದಾರೆ ಎಲ್ಲಾ ಕಡೆ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಕ್ಕದಲ್ಲೇ ಕಟ್ಟಡ ನಿರ್ಮಾಣ ಮಾಡುತ್ತಿದ್ದ ಸ್ಥಳದಲ್ಲಿ ಪಾದಚಾರಿ ಮಾರ್ಗವನ್ನು ಹಾಳುಮಾಡಿದ್ದು, ಕಟ್ಟಡ ಮಾಲೀಕರಿಗೆ ದಂಡ ವಿಧಿಸುವ ಜೊತೆಗೆ ಮಾಲೀಕರಿಂದಲೇ ಪಾದಚಾರಿ ಮಾರ್ಗವನ್ನು ಸರಿಪಡಿಸಬೇಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೆಂಡರ್ ಜೋನ್ ಮಾಡಲು ಸೂಚನೆ:

ಅಮೃತ ನಗರ ಕಡೆ ಹೋಗುವ ರಸ್ತೆ ಬದಿ ಸರ್ಕಾರಿ ಜಾಗವಿದ್ದು, ಸದರಿ ಸ್ಥಳದಲ್ಲಿ ವೆಂಡರ್ ಜೋನ್ ನಿರ್ಮಿಸಿ ಪಾದಚಾರಿ ಮಾರ್ಗಗಳಲ್ಲಿ ಮಾರಾಟ ಮಾಡುವ ಬೀದಿ ಬದಿ ವ್ಯಾಪಾರಿಗಳಿಗೆ ಒಂದೇ ಕಡೆ ವ್ಯಾಪಾರ ಮಾಡಲು ಸರಿಯಾದ ವ್ಯವಸ್ಥೆ ಮಾಡಿಕೊಡಲು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು.

ನಮ್ಮ‌ ಕ್ಲೀನಿಕ್ ಪರಿಶೀಲನೆ:

ದಾಸರಹಳ್ಳಿಯಲ್ಲಿರುವ ನಮ್ಮ‌ ಕ್ಲೀನಿಕ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯವಿದ್ದು, ಅದನ್ನು ಸಾರ್ವಜನಿಕರು ಉಪಯೋಗಿಸಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಳೆ ನೀರಿನ ಕಲ್ವರ್ಟ್ ಕಾಮಗಾರಿ ಪರಿಶೀಲನೆ:

ರಾಚೇಚನಹಳ್ಳಿ ಕೆರೆ ಬಳಿಯ ಶೋಭ ಮೂನ್ ಸ್ಟೋನ್ ಅಪಾರ್ಟ್ಮೆಂಟ್ ಬಳಿ ಮಳೆ ನೀರು ಸರಾಗವಾಗಿ ಹರಿದು ಹೋಗುವ ಸಲುವಾಗಿ ರಸ್ತೆ ಮಾರ್ಗದಲ್ಲಿ ಕಲ್ವರ್ಟ್ ಕಾಮಗಾರಿ ನಡೆಯುತ್ತಿದ್ದು, ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜೊತೆಗೆ ಕಲ್ವರ್ಟ್ ಗೆ ಕೊಳಚೆ ನೀರು ಬರುತ್ತಿದ್ದು, ಕಲ್ವರ್ಟ್ ಗೆ ಕೊಳಚೆ ನೀರು ಬರದಂತೆ ಜಲಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದನ್ನೂ ಓದಿ : KR Market Flyover: ಫ್ಲೈಓವರ್ ಮೇಲಿನಿಂದ ಹಣದ ಮಳೆ ಸುರಿಸಿದ ವ್ಯಕ್ತಿ!

ಮತಗಟ್ಟೆಗಳ ಪರಿಶೀಲನೆ:

ಕೆನ್ನೆತ್ ಜಾರ್ಜ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ 6 ಮತಗಟ್ಟೆಗಳ ಪರಿಶೀಲನೆ ನಡೆಸಿ, ಎಲ್ಲಾ ವ್ಯವಸ್ಥೆಗಳನ್ನು ಸರಿಯಾಗಿರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ದಾಸರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ 6 ಮತಗಟ್ಟೆ ಬರಲಿದ್ದು, ಮುಖ್ಯ ರಸ್ತೆಯಿಂದ ಶಾಲೆಗೆ ಬರುವ ರಸ್ತೆ ಮಾರ್ಗವು ಜಲಮಂಡಳಿಯಿಂದ ರಸ್ತೆ ಅಗೆದಿದ್ದು, ಬಾಕಿ ಕೆಲಸವನ್ನು ಪೂರ್ಣಗೊಳಿಸಿ ಕೂಡಲೆ ರಸ್ತೆ ದುರಸ್ತಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರಿಶೀಲನೆಯ ವೇಳೆ ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ಕಾರ್ಯಪಾಲಕ ಅಭಿಯಂತರರು, ವಲಯ ಆರೋಗ್ಯಾಧಿಕಾರಿ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News