ಗ್ರಾಮಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್

ರಾಜ್ಯದ 30 ಜಿಲ್ಲೆಗಳ 5,762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ (Gram Panchayat Election) ನಡೆಯಲಿದೆ. 

Written by - Yashaswini V | Last Updated : Nov 30, 2020, 01:08 PM IST
  • ರಾಜ್ಯದ 30 ಜಿಲ್ಲೆಗಳ 5,762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ
  • 2020ರ ಡಿಸೆಂಬರ್ 22ರಂದು ಮೊದಲ ಹಂತದ ಚುನಾವಣೆ
  • 2020ರ ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ
ಗ್ರಾಮಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್ title=

ಬೆಂಗಳೂರು: ಕೊರೊನಾ ಕಾರಣಕ್ಕೆ ಆಗುತ್ತೋ ಇಲ್ಲವೋ ಎಂದು ಅನುಮಾನ ಮೂಡಿಸಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ‌ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಇಂದು‌ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣೆ ಆಯೋಗ‌ವು 2020ರ ಡಿಸೆಂಬರ್ 22ರಂದು ಮೊದಲ ಮತ್ತು ಡಿಸೆಂಬರ್  27ರಂದು ಎರಡನೇ ಹಂತದ ಚುನಾವಣೆ ನಡೆಸುವುದಾಗಿ ಘೋಷಿಸಿದೆ. ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಎರಡೂ ಹಂತದ ಮತಎಣಿಕೆ ಒಂದೇ ದಿನ ನಡೆಯಲಿದೆ.

ಪಂಚಾಯತ್ ಚುನಾವಣೆ ನಡೆಸುವ ಮೂಲಕ ಚಿತಾವಣೆಗೆ ಇತಿಶ್ರೀ ಹಾಡುವಂತೆ ಆಯೋಗಕ್ಕೆ ಎಚ್‌.ಕೆ. ಪಾಟೀಲ್ ಪತ್ರ

ರಾಜ್ಯದ 30 ಜಿಲ್ಲೆಗಳ 5,762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ (Gram Panchayat Election) ನಡೆಯಲಿದೆ. ಒಟ್ಟು 92,121 ಸದಸ್ಯರ ಆಯ್ಕೆಗಾಗಿ ಅಂದು ಬೆಳಿಗ್ಗೆ  7 ರಿಂದ ಸಂಜೆ  5 ಗಂಟೆ ತನಕ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ ಜಿಲ್ಲೆಯ ಅರ್ಧ ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಯಲಿದೆ. ಉಳಿದ ತಾಲೂಕುಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಪ್ರತಿ ಜಿಲ್ಲೆಗಳಲ್ಲೂ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ.

ಗ್ರಾ.ಪಂ ಚುನಾವಣೆ ಗೆಲ್ಲಲು ಬಿಜೆಪಿಯಿಂದ 'ಪಂಚರತ್ನ' ಸೂತ್ರ..!

ಚುನಾವಣೆಯಲ್ಲಿ ಕೋವಿಡ್-19 (Covid 19) ಪಾಸಿಟಿವ್ ಇರುವ ರೋಗಿಗಳಿಗೆ ಕೊನೆಯ ಒಂದು ಗಂಟೆಯಲ್ಲಿ ಮತ ಚಲಾಯಿಸಲು ಅವಕಾಶ ಮಾಡಿಕೊಡಲಾಗಿದೆ.

Trending News