ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ

ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕಡೆಗೂ ಮುಹೂರ್ತ ಕೂಡಿಬಂದಿದೆ. ಸೆಪ್ಟೆಂಬರ್ 3ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರು ಶಾಸಕರನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

Last Updated : Aug 29, 2017, 06:08 PM IST
ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ title=

ಬೆಂಗಳೂರು : ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ಕಡೆಗೂ ಮುಹೂರ್ತ ಕೂಡಿಬಂದಿದೆ. ಸೆಪ್ಟೆಂಬರ್ 3ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರು ಶಾಸಕರನ್ನು ಹೊಸದಾಗಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಜನವರಿ 3, 2017 ರಂದು ಸಚಿವ ಎಚ್.ಎಸ್. ಮಹದೇವಪ್ರಸಾದ್ ಅವರ ನಿಧನದಿಂದ ಒಂದು ಸ್ಥಾನ ತೆರವಾಗಿತ್ತು. ಎಚ್,ವೈ,ಮೇಟಿ ಮತ್ತು ಡಾ.ಜಿ.ಪರಮೇಶ್ವರ್ ಅವರ ರಾಜಿನಾಮೆಯಿಂದ ಮತ್ತೆರಡು ಸ್ಥಾನಗಳು ತೆರವಾಗಿದ್ದವು. 

ಆಗಸ್ಟ್ 16ರಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಮತ್ತು ಕಾರ್ಯದರ್ಶಿ ದಿನೇಶ್ ಗುಂಡೂರಾವ್, ಸಚಿವರಾದ ಎಸ್.ಆರ್. ಪಾಟೀಲ್,  ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆಯ ಬಗ್ಗೆ ಸಮಾಲೋಚನೆ ನಡೆಸಿದ್ದರು. 

ಶಾಸಕರಾದ ಎಚ್.ಎಂ.ರೇವಣ್ಣ, ಕೆ.ಷಡಕ್ಷರಿ ಮತ್ತು ಆರ್.ವಿ.ತಿಮ್ಮಾಪುರ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರಾಜ್ಯಪಾಲ ವಜುಬಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

Trending News