ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ, ಕೇಂದ್ರದಿಂದ ಪರಿಹಾರ ಕೊಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಬರ ಅಧ್ಯಯನ ತಂಡ ಇಲ್ಲಿ ಪರಿಸ್ಥಿತಿ ಅಧ್ಯಯನ ಮಾಡಿದೆ, ಆದರೂ ಯಾವುದೇ ನೆರವು ಬಂದಿಲ್ಲ. ಈಗ ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ ಕೇಂದ್ರದಿಂದ ಪರಿಹಾರ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

Written by - Prashobh Devanahalli | Last Updated : Oct 31, 2023, 03:33 PM IST
  • ಬಿಜೆಪಿ ನಾಯಕರು ರಾಜ್ಯದ ಬರ ಅಧ್ಯಯನ ಮಾಡಿ
  • ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಲಿ
  • ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ
ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ, ಕೇಂದ್ರದಿಂದ ಪರಿಹಾರ ಕೊಡಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್  title=

ಬೆಂಗಳೂರು: ಬಿಜೆಪಿ ನಾಯಕರು ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿದರೆ ತಪ್ಪೇನೂ ಇಲ್ಲ. ಕೇಂದ್ರ ಬರ ಅಧ್ಯಯನ ತಂಡ ಇಲ್ಲಿ ಪರಿಸ್ಥಿತಿ ಅಧ್ಯಯನ ಮಾಡಿದೆ, ಆದರೂ ಯಾವುದೇ ನೆರವು ಬಂದಿಲ್ಲ. ಈಗ ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿ ಕೇಂದ್ರದಿಂದ ಪರಿಹಾರ ಕೊಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಮಂಗಳವಾರ, ರಾಜ್ಯದಲ್ಲಿ ಬಿಜೆಪಿ ನಾಯಕರು ಬರ ಅಧ್ಯಯನ ನಡೆಸುವ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ಇದನ್ನೂ ಓದಿ: ಶಾಸಕ ಅಬ್ಬಯ್ಯಾ ಕಿಡಿ, ಕಾಂಗ್ರೆಸ್ ನಲ್ಲಿ ತಳಮಳ; ಕಾರ್ಪೊರೇಟರ್‌ಗಳ ಎದೆಯಲ್ಲಿ ಢವಢವ 

ಕರ್ನಾಟಕ ಸರ್ಕಾರ, ಕೇಂದ್ರದ ಬರ ಪರಿಸ್ಥಿತಿ ನಿಯಮಗಳ ಆಅನುಸಾರ ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಬರ ಪರಿಹಾರ ನೀಡುವಲ್ಲಿ ಉಪಕಾರ ಮನಸ್ಥಿತಿ ಪ್ರದರ್ಶಿಸಲಿ. ಕಂದಾಯ ಸಚಿವರು ಹಾಗೂ ಕೃಷಿ ಸಚಿವರು ಕೇಂದ್ರಕ್ಕೆ ಸಲ್ಲಿಸಿರುವ ಮನವಿಗೆ ತಕ್ಕಂತೆ ಪರಿಹಾರ ನೀಡಲಿ ಎಂದೂ ತಿಳಿಸಿದರು.

ಕೇಂದ್ರದ ಬರ ಅದ್ಯಯನ ತಂಡ ಅಧ್ಯಯನ ಮಾಡಿದರೂ ಯಾವುದೇ ಸ್ಪಂದನೆ ಬಂದಿಲ್ಲವಲ್ಲ ಎಂದು ಕೇಳಿದಾಗ, “ಆ ಕಾರಣಕ್ಕೆ ರಾಜ್ಯ ಬಿಜೆಪಿ ನಾಯಕರು ಕೂಡ ರಾಜ್ಯ ಪ್ರವಾಸ ಮಾಡಿ ಬರ ಅಧ್ಯಯನ ಮಾಡಲಿ. ನಂತರ ಅವರು ಕೇಂದ್ರ ಸರ್ಕಾರಕ್ಕೆ ತಮ್ಮ ವರದಿ ನೀಡಿ, ರಾಜ್ಯಕ್ಕೆ ಸೂಕ್ತ ಪರಿಹಾರ ಮೊತ್ತ ಕೊಡಿಸಲಿ” ಎಂದು ಛೇಡಿಸಿದರು.

ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಸುಟ್ಟಿದ್ದು, ಎಂಇಎಸ್ ಕರಾಳ ದಿನ ಆಚರಣೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಇದು ತಪ್ಪು. ನಾವು ನಮ್ಮ ರಾಜ್ಯದ ಹಿತ ಕಾಯಲು, ಕನ್ನಡಿಗರ ರಕ್ಷಣೆಗೆ ಬದ್ಧ. ಕರ್ನಾಟಕದಲ್ಲಿರುವ ಜನರು, ಅಲ್ಲಿರುವ ಕನ್ನಡಿಗರ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ನಿನ್ನೆ ಮುಖ್ಯಮಂತ್ರಿಗಳು ಕೂಡ ಗೃಹಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ಮಾಡಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ.. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News