ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್

Written by - Krishna N K | Last Updated : Dec 1, 2024, 04:00 PM IST
    • ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ
    • ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗುವುದು.
    • ಸ್ವಾಭಿಮಾನಿಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ.
ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್ title=

DCM D.K. Shivakumar said Congress-led convention to be held in Hassan on December five | ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ. ಶಿವಕುಮಾರ್

DK Shivakumar, Congress-led convention, News in Kannada, latest news in kannada, live news in kannada, news for kannada, news of kannada, news in kannada today, today news in kannada, today kannada news, latest news in kannada, breaking news in kannada, Daily news in Kannada, karnataka news, ಕನ್ನಡ,  ವಿಡಿಯೋ, ಕನ್ನಡ ನ್ಯೂಸ್, today's horoscope in kannada, Religion News in kannada, ಸಂತೋಷ್‌ ಲಾಡ್‌, ಸಚಿವ ಸಂತೋಷ್‌ ಲಾಡ್‌,

 

ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಬೆಂಗಳೂರು : ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಭಾನುವಾರ ಮಾತನಾಡಿದರು. ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಇವರ ಬೆಂಬಲವನ್ನು ನಾವು ಸ್ವೀಕರಿಸುತ್ತೇವೆ.

ನಾನು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಎಐಸಿಸಿ ನಾಯಕರು ಮಾರ್ಗದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ನಾಲ್ಕು ಜಿಲ್ಲೆಗಳ ನಾಯಕರು ಹಾಗೂ ಪದಾಧಿಕಾರಿಗಳ ಜತೆ ಇದರ ಪೂರ್ವಭಾವಿ ಸಭೆಯನ್ನು ಭಾನುವಾರ (ಇಂದು) ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಗಿದೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗುವುದು.

ಸಮಾನತೆ, ಸಂವಿಧಾನದ ಬಗ್ಗೆ ಗೌರವ ಹೊಂದಿರುವವರು, ಸ್ವಾಭಿಮಾನಿಗಳಿಗೆ ಈ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಸಧ್ಯದಲ್ಲೇ ನಾನು ಹಾಗೂ ಕೆಪಿಸಿಸಿ ತಂಡ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ತಯಾರಿಯನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು.

ಜನರ ಕಲ್ಯಾಣ, ಸಂವಿಧಾನ ರಕ್ಷಣೆ, ಸ್ವಾಭಿಮಾನ ರಕ್ಷಣೆ, ಸರ್ಕಾರದ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಜನ ಈಗಾಗಲೇ ತೀರ್ಪು ಕೊಟ್ಟಿದ್ದಾರೆ. ಎಐಸಿಸಿ ನಾಯಕರ ನಿರ್ದೇಶನದಂತೆ ಮುಂದಿನ ಎರಡು ತಿಂಗಳ ಕಾಲ ಒಂದಲ್ಲಾ ಒಂದು ರೀತಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಈಗಿನಿಂದಲೇ ಪಕ್ಷ ಸಂಘಟನೆ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿನ ಯಶಸ್ಸು ಮುಂದುವರೆಸಿಕೊಂಡು ಹೋಗಲು ಪಕ್ಷ ಸಂಘಟನೆ ಮಾಡಲಾಗುವುದು. ಚುನಾವಣೆ ಬಂದಾಗ ಸಿದ್ಧತೆ ಮಾಡಿಕೊಳ್ಳುವುದಲ್ಲ. ಚುನಾವಣೆ ಮುಗಿದ ಮರು ದಿನದಿಂದಲೇ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು.

 

Trending News