ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲವಾಗಿದ್ದ ಕೆಂಪಣ್ಣ ಅವರು ನನ್ನ ಬಳಿ ಗುತ್ತಿಗೆದಾರರ ಸಮಸ್ಯೆಗಳನ್ನು ಇಟ್ಟುಕೊಂಡು ಅನೇಕ ಬಾರಿ ಚರ್ಚೆ ನಡೆಸಿದ್ದರು. 

Written by - Prashobh Devanahalli | Edited by - Chetana Devarmani | Last Updated : Sep 19, 2024, 02:19 PM IST
  • ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ
  • ಕೆಂಪಣ್ಣ ಅಗಲಿಕೆಗೆ ಡಿ.ಕೆ. ಶಿವಕುಮಾರ್ ಸಂತಾಪ
  • ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ title=

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದರು.

"ಕೆಂಪಣ್ಣ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂಬ ಸುದ್ದಿ ನೋವುಂಟುಮಾಡಿದೆ. ಸದಾ ಕ್ರಿಯಾಶೀಲರಾಗಿ ಇರುತ್ತಿದ್ದ ಅವರ ಸಾವು ಗುತ್ತಿಗೆದಾರರ ಹೋರಾಟ ಮತ್ತು ದನಿಗೆ ತುಂಬಲಾರದ ನಷ್ಟ.

ಇದನ್ನೂ ಓದಿ:Viral video: ಏಕಕಾಲಕ್ಕೆ ಈ ಮಹಿಳೆ 18 ಮಕ್ಕಳ ಗರ್ಭಿಣಿ! ವಿಡಿಯೋ ನೋಡಿ ಶಾಕ್‌ ಆಗ್ತೀರ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿರುದ್ಧ ದನಿ ಎತ್ತಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದ ಕಾರಣಕ್ಕೆ ಇಳಿ ವಯಸ್ಸಿನಲ್ಲೂ ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿದ್ದರು.

ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರಿಯಾಶೀಲವಾಗಿದ್ದ ಕೆಂಪಣ್ಣ ಅವರು ನನ್ನ ಬಳಿ ಗುತ್ತಿಗೆದಾರರ ಸಮಸ್ಯೆಗಳನ್ನು ಇಟ್ಟುಕೊಂಡು ಅನೇಕ ಬಾರಿ ಚರ್ಚೆ ನಡೆಸಿದ್ದರು. 

ಈ ಹಿರಿಯ ಜೀವದ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ವರ್ಗಕ್ಕೆ, ಬಂಧು, ಬಳಗದವರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ'ಗೆ ಪ್ರಧಾನಿ ಮೋದಿ ಸಂಪುಟ ಒಪ್ಪಿಗೆ; ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News