ಬೆಂಗಳೂರು: ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.


ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿ


ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.


ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಕರ್ನಾಟಕಕ್ಕೆ ಜಲ ಕಂಟಕ.. ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಬಿರುಗಾಳಿ ಗುಡುಗು ಮಿಂಚು ಸಹಿತ ವರುಣಾರ್ಭಟದ ಎಚ್ಚರಿಕೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.