ಬೆಂಗಳೂರು : ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ 'ಎಕ್ಸ್' ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಡಿಸಿಎಂ ಡಿ‌.ಕೆ.ಶಿವಕುಮಾರ್ ಅವರು ಮಂಗಳವಾರ ಈ ರೀತಿ ಉತ್ತರಿಸಿದರು.


ಇದನ್ನೂ ಓದಿ:‘ಆಪರೇಷನ್ ಕಮಲ’ ವಿಚಾರ; ಸ್ವಲ್ಪ ಕಾದು ನೋಡಿ ಎಂದ ಮುರುಗೇಶ್ ನಿರಾಣಿ


ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.


ಸರ್ಕಾರ ಮಧ್ಯೆ ಪ್ರವೇಶ ಮಾಡುವುದಿಲ್ಲ : ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ಕೇಳಿದಾಗ, "ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ.  ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ"  ಎಂದರು.


ಇದನ್ನೂ ಓದಿ: ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ: ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂದು ಘೋಷಣೆ


ಕುಮಾರಸ್ವಾಮಿ ಅವರು ಸತ್ಯವನ್ನು ಒಪ್ಪಿಕೊಂಡಿರುವುದಕ್ಕೆ ಶುಭವಾಗಲಿ, ಸತ್ಯಮೇವ ಜಯತೇ ಎನ್ನುವ ಮಾತಿನಂತೆ ಸತ್ಯವನ್ನ ಎತ್ತಿ ಹಿಡಿದಿರುವುದಕ್ಕೆ ಸಂತೋಷ ಎಂದು ಹೇಳಿದರು.
 
ದೇವೇಗೌಡರ ಮೌಲ್ಯ, ಜಾತಿ ಕೆಡಿಸಿದ ಕುಮಾರಸ್ವಾಮಿ : "ಕುಮಾರಸ್ವಾಮಿ ಅವರು ದೇವೇಗೌಡರ ಕೊನೆಗಾಲದಲ್ಲಿ ಅವರ ಜಾತಿ ಕೆಡಿಸಿದ್ದಾರೆ. ದೇವೇಗೌಡರು ಜೀವನದ ಉದ್ದಕ್ಕೂ ಕಾಪಾಡಿಕೊಂಡು ಬಂದಿದ್ದ ಮೌಲ್ಯಗಳನ್ನ ಅವರ ಕೊನೆಗಾಲದಲ್ಲಿ ಕುಮಾರಸ್ವಾಮಿ ನಾಶ ಮಾಡಿದ್ದಾರೆ” ಎಂದು ಛೇಡಿಸಿದರು.


“ಹಿರಿಯರಾದ ದೇವೇಗೌಡರಿಗೆ ವಿಧಿಯೇ ಇಲ್ಲದಂತೆ ಕುಮಾರಸ್ವಾಮಿ ಮಾಡಿದ್ದು ನೋಡಿದರೆ, ನನಗೆ ಮಾತುಗಳೇ ಹೊರಡುತ್ತಿಲ್ಲ, ನನಗೇ ಅಯ್ಯೋ ಅನಿಸುತ್ತದೆ. I feel very sorry. ಎನ್‌ಡಿಎ ಸರ್ಕಾರದ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿ ಅವರಿಗೆ ಒಳ್ಳೆಯದಾಗಲಿ” ಎಂದು ಹೇಳಿದರು.


ಇದನ್ನೂ ಓದಿ: ರಾಜ್ಯಾಧ್ಯಕ್ಷ ಘೋಷಣೆಗೆ ಹಾವೇರಿಯಲ್ಲಿ ಬಿಜೆಪಿ ಮುಖಂಡರ ಸಂತಸ


ಕುಮಾರಸ್ವಾಮಿ ಅಸೂಯೆಗೆ ಮದ್ದಿಲ್ಲ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ, ಈ ವಿಚಾರವಾಗಿ ಚರ್ಚೆಗೆ ಸಿದ್ಧ ಎನ್ನುವ ಕುಮಾರಸ್ವಾಮಿ ಆರೋಪಕ್ಕೆ, "ಪಾಪ, ಕುಮಾರಸ್ವಾಮಿ ಅವರಿಗೆ ಅಸೂಯೆ, ಈ ಅಸೂಯೆಗೆ ಯಾವುದೇ ಮದ್ದಿಲ್ಲ. ನನಗೆ ಈ ಅವಕಾಶ ಸಿಕ್ಕಿಲ್ಲವಲ್ಲ ಎಂದು ಕೈ, ಕೈ ಹಿಸುಕಿಕೊಳ್ಳುತ್ತಿದ್ದಾರೆ" ಎಂದರು.


“ಶಕ್ತಿ ಯೋಜನೆಯಿಂದ ಈವರೆಗೂ ರಾಜ್ಯದ ಮಹಿಳೆಯರು 100 ಕೋಟಿ ರೂಪಾಯಿ ಮೌಲ್ಯದ ಬಸ್ ಟ್ರಿಪ್ ಗಳಲ್ಲಿ ಉಚಿತವಾಗಿ ಓಡಾಡಿದ್ದಾರೆ‌. ಪ್ರತಿ ತಿಂಗಳು 1 ಕೋಟಿಗೂ ಹೆಚ್ಚಿನ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ತಲುಪುತ್ತಿದೆ. ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣದ ಜನತೆ ಸೇರಿದಂತೆ ಅವರ ಪಕ್ಷದ ಕಾರ್ಯಕರ್ತರ ಬಳಿ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿದೆಯೋ ಅಥವಾ ಅವರ ಸ್ವಂತ ದುಡ್ಡು ಹೋಗುತ್ತಿದೆಯೋ ಎನ್ನುವ ಬಗ್ಗೆ ಮಾಹಿತಿ ಕೇಳಲಿ” ಎಂದು ಸವಾಲು ಹಾಕಿದರು.


ನನ್ನ ಆಡಳಿತಾವಧಿಯಲ್ಲಿ ನಾನು ಸಾಲಮನ್ನಾ ಮಾಡಿದ್ದೇನೆ, ಸರ್ಕಾರ ಈಗ ಸಾಲಮನ್ನಾ ಮಾಡಿ ತೋರಿಸಲಿ ಎಂಬ ಕುಮಾರಸ್ವಾಮಿ ಮಾತಿನ ಬಗ್ಗೆ ಕೇಳಿದಾಗ,  "ಅವರ ಸವಾಲನ್ನು ಅತ್ಯಂತ ಸಂತೋಷ, ಗೌರವದಿಂದ ಸ್ವೀಕರಿಸುತ್ತೇವೆ. ಡಿ. 4 ನೇ ತಾರೀಖಿನ ನಂತರ ಅವರ ಎಲ್ಲಾ ಕಡತಗಳು, ಲೆಕ್ಕಾಚಾರಗಳು, ಗ್ಯಾರಂಟಿಗಳು, ಸವಾಲುಗಳನ್ನು ತೆಗೆದುಕೊಂಡು ವಿಧಾನಸಭೆ ಅಧಿವೇಶನಕ್ಕೆ ಬರಲಿ. ಅವರ ಭರವಸೆ, ಆಡಿದ ಮಾತುಗಳು, ಪಂಚರತ್ನಗಳು ಮತ್ತು ಈ ಹಿಂದೆ ಏನೇನೆಲ್ಲಾ ಹೇಳಿದ್ದರು ಅದನ್ನೆಲ್ಲಾ ತೆಗೆದುಕೊಂಡು ವಿಧಾನಸಭೆಗೆ ಬರಲಿ. ಅಲ್ಲಿ ಅವರ ನುಡಿಮುತ್ತುಗಳನ್ನು ಕೇಳೋಣ. ಅವರ ಸವಾಲು, ಪಂಚರತ್ನಗಳಿಗೆ ಕರ್ನಾಟಕ ಜನ ಈಗಾಗಲೇ ಚುನಾವಣೆಯಲ್ಲಿ ಉತ್ತರ ಕೊಟ್ಟಿದ್ದಾರೆ. ಅದೇ ರೀತಿ ನಮ್ಮ ಗ್ಯಾರಂಟಿಗಳಿಗೂ ಉತ್ತರ ಕೊಟ್ಟಿದ್ದಾರೆ” ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.