ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾಯಕತ್ವ ಹಾಗೂ ಆತ್ಮವಿಶ್ವಾಸದ ಕೊರತೆ ಇದೆ. ಹೀಗಾಗಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಈಗ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಸೆಳೆಯಲು ಬೆನ್ನು ಬಿದ್ದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನೀವು ಬಿ.ಟಿ ಹತ್ತಿ ಬೆಳೆಯುತ್ತಿರಾ? ಹಾಗಾದರೆ ತಪ್ಪದೇ ಕೃಷಿ ಇಲಾಖೆಯ ಈ ಸಲಹೆಗಳನ್ನು ಪಾಲಿಸಿ..!


ಮೈಸೂರು ಪಿರಿಯಾಪಟ್ಟಣ ಬೈಲುಕುಪ್ಪೆ ಹೆಲಿಪ್ಯಾಡ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ತಮ್ಮ ಪಕ್ಷಕ್ಕೆ ವಾಪಸ್ ಕರೆದೊಯ್ಯಲು ಬಿಜೆಪಿಯ ಅನೇಕ ನಾಯಕರು ಶೆಟ್ಟರ್ ಅವರಿಗೆ ದುಂಬಾಲು ಬೀಳುತ್ತಿದ್ದಾರೆ. ಅವರ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಅವರ ಬಳಿ ಅಭ್ಯರ್ಥಿಗಳಿಲ್ಲವೇ? ಅವರ ಪಕ್ಷ ಸಮರ್ಥವಾಗಿದ್ದರೆ ಚುನಾವಣೆ ಎದುರಿಸಲಿ ಎಂದರು.


ನಾವು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಕುಮಾರಸ್ವಾಮಿ ಅವರು ತಮ್ಮ ಸರ್ಕಾರವನ್ನು ಕೆಡವಿ, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿದವರನ್ನು ಈಗ ತಬ್ಬಿಕೊಂಡು ರಾಜಕಾರಣ ಮಾಡುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಇದು ಎರಡೂ ಪಕ್ಷಗಳಲ್ಲಿನ ದುಸ್ಥಿತಿಗೆ ಸಾಕ್ಷಿ ಎಂದು ಹೇಳಿದರು. 


ಇದನ್ನೂ ಓದಿ: ATMಗೆ ಬರುವ ವೃದ್ದರೇ ಎಚ್ಚರ..! ಹಣ ಕಳೆದುಕೊಳ್ಳುವ ಮುನ್ನ ಈ ಸುದ್ದಿ ನೋಡಿ.. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.