ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Lok sabha elections 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರು: ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೋಲಾರ ಟಿಕೆಟ್ ವಿಚಾರವಾಗಿ ಶಾಸಕರ ರಾಜೀನಾಮೆ ನೀಡಲು ಮುಂದಾಗಿರುವ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು, ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಕೇಳಿದಾಗ, "ಇಂದು ಡಿ.ಕೆ. ಸುರೇಶ್ ಅವರಿಗೆ ಬಿ ಫಾರಂ ನೀಡಿ, ನಮ್ಮ ಮನೆ ದೇವರು ಕೆಂಕೇರಮ್ಮ, ಕಬ್ಬಾಳಮ್ಮ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಗುವುದು. ನಂತರ ರಾಮನಗರದಲ್ಲಿ ಮುಖ್ಯಮಂತ್ರಿಗಳ ಜತೆಗೂಡಿ ಕಾರ್ಯಕರ್ತರ ಸಭೆ ಮಾಡಿ ನಂತರ ಸುರೇಶ್ ಅವರ ನಾಮಪತ್ರ ಸಲ್ಲಿಸಲಾಗುವುದು.
ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.
ಇದನ್ನೂ ಓದಿ: ಬಾಲಿವುಡ್‌ಗೆ ಬರೀ ಗೈಯಲ್ಲಿ ಬಂದ ಈಕೆ ಇಂದು ಕೋಟ್ಯಾಧೀಶೆ!! ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಎಷ್ಟು ಕೋಟಿಯ ಒಡತಿ ಗೊತ್ತೇ!
ಎಲ್ಲಾ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೊಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಕೇಳಿದಾಗ, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.
ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, "ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ" ಎಂದು ತಿಳಿಸಿದರು.
ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲೇ ಜೆಡಿಎಸ್-ಬಿಜೆಪಿ ಮೈತ್ರಿ ಆಗಿದ್ದಿದ್ದರೆ ಇಂಥ ಕೆಟ್ಟ ಸರಕಾರ ಬರುತ್ತಿರಲಿಲ್ಲ: ತೇಜಸ್ವಿ ಸೂರ್ಯ
ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂದು ಕೇಳಿದಾಗ, ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.