ಬೆಂಗಳೂರು: ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಮಹಾಭಾರತದ ಶಕುನಿ ಮಾಮಾ ಎಂದೇ ಖ್ಯಾತರಾದ ಗುಫಿ ಪೈಂಟಲ್ ನಿಧನ
ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದರು.
ಇದನ್ನೂ ಓದಿ: ಅಭಿಷೇಕ್ ಅಂಬರೀಷ್ ಅವಿವಾ ಅದ್ದೂರಿ ವಿವಾಹ: ಸಿನಿ ತಾರೆಯರ ಸಮಾಗಮ
ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.