ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ, ಆತಂಕ ಪಡುವ ಅಗತ್ಯವಿಲ್ಲ : ಡಿಸಿಎಂ ಡಿಕೆಶಿ

Bengaluru Bomb Threat : ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು. ಪೋಷಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ, ಧೈರ್ಯದಿಂದ ಇರಬೇಕು  ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Dec 1, 2023, 03:20 PM IST
  • ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು.
  • ಪೋಷಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ.
  • ಶಾಲೆಗಳಿಗೆ ಬಾಂಬ್‌ ಬೆದರಿಕೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆ
ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ, ಆತಂಕ ಪಡುವ ಅಗತ್ಯವಿಲ್ಲ : ಡಿಸಿಎಂ ಡಿಕೆಶಿ title=

ಬೆಂಗಳೂರು : ಬೆಂಗಳೂರಿನ‌ 15 ಶಾಲೆಗಳಿಗೆ ಬಂದಿರುವ ಬಾಂಬ್‌ ಬೆದರಿಕೆ ಹುಸಿ ಕರೆಯಾಗಿದ್ದು, ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಹುಸಿ ಬಾಂಬ್ ಕರೆ ಪಡೆದಿದ್ದ ನೀವ್ ಅಕಾಡೆಮಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹುಸಿ ಬೆದರಿಕೆ ಹಾಕಿದವರನ್ನು 24 ಗಂಟೆಯೋಳಗೆ ಪತ್ತೆ ಮಾಡಲಾಗುವುದು, ಪೊಲೀಸರು ಈಗಾಗಲೆ ಕಾರ್ಯಚರಣೆ ನಡೆಸುತ್ತಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯೂ ಹೀಗೆ ಆಗಿತ್ತು. ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಬಂದಿರುವ ಸುದ್ದಿ ತಿಳಿದ ಕೂಡಲೆ ಗಾಬರಿಯಾಯಿತು. ನನಗೆ ಪರಿಚಯವಿರುವ ಕೆಲವು ಶಾಲೆಗಳಿಗೆ ಹೀಗೆ ಇ- ಮೇಲ್‌ ಸಂದೇಶದ ಮೂಲಕ ಬೆದರಿಕೆ ಬಂದಿದೆ. ಪೋಲಿಸ್ ಆಯುಕ್ತರು ಈಗಾಗಲೆ ಸುದ್ದಿಗೋಷ್ಠಿ ನಡೆಸಿ ಇದು ಹುಸಿ ಬಾಂಬ್‌ ಬೆದರಿಕೆ ಎಂದು ಮಾಹಿತಿ ನೀಡಿದ್ದಾರೆ. ಪೋಷಕರು ಆತಂಕದಲ್ಲಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಧೈರ್ಯದಿಂದ ಇರಬೇಕು ಎಂದರು.

ಇದನ್ನೂ ಓದಿ:ಪಂಚರಾಜ್ಯದ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಸಚಿವ ಪ್ರಹ್ಲಾದ್ ಜೋಶಿ

ಅಲ್ಲದೆ, ಈಗಾಗಲೆ ಬಾಂಬ್‌ ನಿಷ್ಕ್ರಿಯದಳ ಸ್ಥಳ ಪರಿಶೀಲನೆ ನಡೆಸಿದೆ. ಪೊಲೀಸ್‌ ಭದ್ರತೆ ಇರುವ ಕಾರಣ ನಮ್ಮ ಮನೆ ಹತ್ತಿರ ಹೀಗೆ ಆಗುವ ಸಾಧ್ಯತೆ ಕಡಿಮೆ. ಆದರೂ ಇದು ಪ್ರಮುಖ ಪ್ರದೇಶವಾದರಿಂದ ಸ್ವಲ್ಪ ಎಚ್ಚರದಿಂದ ಇರಬೇಕು. ಬೆಂಗಳೂರು ಜನತೆಗೆ ಯಾವ ಆತಂಕ ಬೇಡ ಕೆಲವು ದುಷ್ಕರ್ಮಿಗಳಿಂದ ಈ ಬೆದರಿಕೆ ಕರೆ ಬಂದಿದ್ದು, 24 ಗಂಟೆಯೊಳಗೆ ಆರೋಪಗಳನ್ನು ಪತ್ತೆ ಹಚ್ಚುತ್ತೇವೆ ಎಂದರು.

ಬೆಂಗಳೂರು ಹಬ್ಬ ನಡೆಯುವ ಸಂದರ್ಭದಲ್ಲೆ ಹೀಗೆ ಬಾಂಬ್‌ ಬೆದರಿಕೆ ಕರೆ ಬಂದಿದೆ ಎಂದು ಕೇಳಿದಾಗ, ಕೆಲವರು ಕಿಡಿಗೇಡಿಗಳು ಈ ರೀತಿ ಚೇಷ್ಟೆ ಮಾಡುತ್ತಾರೆ, ಹಬ್ಬ ಅದರ ಪಾಡಿಗೆ ಅದು ನಡೆಯುತ್ತದೆ ಎಂದು ತಿಳಿಸಿದರು. ಇನ್ನು ಸೈಬರ್‌ ಕ್ರೈಂ ಪೊಲೀಸರಿಗೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಹೇಳುತ್ತಿರಾ ಎಂದು ಕೇಳಿದಾಗ, ಸೈಬರ್‌ ಕ್ರೈಂ ವಿಭಾಗದವರು ಸಕ್ರಿಯವಾಗಿದ್ದಾರೆ. ತಕ್ಷಣ ಕ್ರಮಕೈಗೊಂಡು ಸಂಬಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ. ನನಗೂ ಫೋನಿನ ಮೂಲಕ ಮಾಹಿತಿ ನೀಡುತ್ತಿದ್ದಾರೆ. ನಮ್ಮ ಮನೆ ಮುಂದೆ ಕೂಡ ಕಾರ್ಯಚರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕವನ್ನು ಉಗ್ರರ ಪಾಲಿನ ಸ್ವರ್ಗವನ್ನಾಗಿಸುತ್ತಿದೆ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆರೋಪ

ಈ ರೀತಿ ಹುಸಿ ಬಾಂಬ್‌ ಕರೆ ಮತ್ತೆ ಮತ್ತೆ ಏಕೆ  ಕೇಳಿಬರುತ್ತಿದೆ ಎಂದು ಕೇಳಿದಾಗ, ಇದು ದಿಕ್ಕು ತಪ್ಪಿಸುವಂತಹ ಕೆಲಸ. ಈಗ ಪರಿಕ್ಷೆ ಸಮಯ ಆದ ಕಾರಣ ಹೀಗಾಗಿರಬಹುದು. ಈ ಹಿಂದೆ ಕೊಡ ವಿಮಾನ ತಡವಾಗಿದೆ ಎಂದು ಈ ರೀತಿ ಕರೆ ಮಾಡಿರುವ ಘಟನೆ ನಡೆದಿತ್ತು. ಕೆಲವೊಮ್ಮೆ 10 ಹುಸಿ ಕರೆಗಳ ಪೈಕಿ ಒಂದು ಟಾರ್ಗೆಟ್ ಮಾಡುವ ಸಾಧ್ಯತೆ ಇರುತ್ತದೆ. ಇಂತಹ ಹುಸಿ ಕರೆಗಳನ್ನು ನಾವು ನಿರ್ಲಕ್ಷಿಸುವುದಿಲ್ಲ. ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News