ಸಾತನೂರು : ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಗೆ ತಿಳಿಸಿದರು.


COMMERCIAL BREAK
SCROLL TO CONTINUE READING

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು ಎಂದರು.


ಇದನ್ನೂ ಓದಿ:ದಾಖಲೆ ಬಿಡುಗಡೆ ಮಾಡಬೇಡಿ ಎಂದು ಕುಮಾರಸ್ವಾಮಿ ಅವರನ್ನು ಹಿಡಿದುಕೊಂಡವರು ಯಾರು: ಡಿಸಿಎಂ


ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.


ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ : ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ ಎಂದರು. 


ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಸ್ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ ಎಂದು ಹೇಳಿದರು.


ಇದನ್ನೂ ಓದಿ:ತುಳಸಿಗೆ ನೀರು ಹಾಕುವಾಗ ಈ ವಸ್ತುವನ್ನು ಗಿಡದ ಪಕ್ಕ ಇಡಿ... ಮನೆಯಲ್ಲಿ ಶುಕ್ರದೆಸೆ ಅಭಿವೃದ್ಧಿಯಾಗಿ ಸಂಪತ್ತು ಉಕ್ಕಿ ಬರುವುದು! ಹಣ, ಕಾರು, ಬಂಗಲೆಗಳ ಒಡೆಯರಾಗುವಿರಿ


ಇಲಾಖಾವಾರು ಕೌಂಟರ್ ಗಳನ್ನು ತೆರೆಯಿರಿ : ಮುಂದಿನ ಜನಸ್ಪಂದನ ಸಭೆಯಲ್ಲಿ ಅರ್ಜಿ ಬರೆಯಲು 5 ಕೌಂಟರ್ ಗಳು ಹಾಗೂ ಇಲಾಖೆವಾರು ಅರ್ಜಿ ಸ್ವೀಕರಿಸಲು ಕೌಂಟರ್ ಗಳನ್ನು ತೆರೆಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. 


ರೇಷ್ಮೆ ಕೃಷಿಯನ್ನು ಕೈ ಬಿಡಬೇಡಿ : ವಾಣಿಜ್ಯ ಬೆಳೆಗಳಿಗೆ ಉತ್ತಮ ಬೇಡಿಕೆಯಿದೆ. ರೇಷ್ಮೆಗೆ ಉತ್ತಮ ಬೆಲೆ ಬಂದಿದೆ. ರಾಜ್ಯದಲ್ಲಿಯೇ ಅತ್ಯಂತ ಹೆಚ್ಚು ರೇಷ್ಮೆಯನ್ನು ಉತ್ಪಾದನೆ ಮಾಡುವ ತಾಲೂಕು ನಮ್ಮದು. ಯಾವುದೇ ಕಾರಣಕ್ಕೂ ರೇಷ್ಮೆ ಬೆಳೆಯನ್ನು ಕೈಬಿಡಬೇಡಿ ಎಂದು ಕೃಷಿಕರಿಗೆ ಕಿವಿ ಮಾತು ಹೇಳಿದರು. ನಂತರ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಹಲವಾರು ಸಮಸ್ಯೆಗಳನ್ನು ಹೊತ್ತು ಸುಮಾರು 700ಕ್ಕೂ ಹೆಚ್ಚು ಅರ್ಜಿಗಳು ಬಂದವು. ಒಂದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಡಿಸಿಎಂ ಪರಿಹಾರ ಸೂಚಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.