ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಬೋಗಸ್ : ಡಿಸಿಎಂ ಸ್ಪಷ್ಟನೆ
ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಸುಳ್ಳು. ಈಗಾಗಲೇ ನಾವು ಶಾಸಕರ ಜೊತೆ ಮಾತನಾಡಿದ್ಧೇವೆ. ಈ ವರ್ಷ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರು : ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಬೋಗಸ್. ಯಾರದ್ದೋ ಪತ್ರಕ್ಕೆ ಯಾವುದೋ ಸಹಿ ಸೇರಿಸಿ ಹಬ್ಬಿಸಿದರೆ ಅದಕ್ಕೆ ಪ್ರತಿಕ್ರಿಯೆ ನೀಡಲು ಆಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಶಾಸಕರ ಸಭೆ ಕರೆದಿದ್ದು, ಅವರ ಜೊತೆ ಮಾತನಾಡುತ್ತೇವೆ. ಈ ವರ್ಷ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗುವುದಿಲ್ಲ. ನೀರಾವರಿ ಸಚಿವನಾಗಿ ನನ್ನ ಇಲಾಖೆಗೂ ನೀಡಲು ಆಗುವುದಿಲ್ಲ. ಈ ವಿಚಾರವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ವಿವರಿಸುತ್ತೇವೆ.
ಇದನ್ನೂ ಓದಿ: ಅರಿಶಿನ ಗುಂಡಿಯಲ್ಲಿ ಯುವಕ ನೀರುಪಾಲು ಪ್ರಕರಣ: SDRF ಜೊತೆ ಕಾರ್ಯಾಚರಣೆಗಿಳಿದ ಜ್ಯೋತಿರಾಜ್
ಕಳೆದ ಸರ್ಕಾರ ರಾಜ್ಯದ ಆರ್ಥಿಕತೆ ದಿವಾಳಿ ಮಾಡಿದೆ. ಹೀಗಾಗಿ ಬಜೆಟ್ ಮಂಡನೆ ಸಮಯದಲ್ಲಿ ಮಂತ್ರಿಗಳು ಕೂಡ ತಾಳ್ಮೆ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಕಳೆದ ಸರ್ಕಾರದ ತಪ್ಪುಗಳನ್ನು ಸರಿಪಡಿಸಬೇಕು. ಜತೆಗೆ ಗ್ಯಾರಂಟಿ ಮಾತನ್ನೂ ಉಳಿಸಿಕೊಳ್ಳಬೇಕು.
ಬಿಜೆಪಿ ಅವಧಿಯಲ್ಲಿ ಆದ ಗಲಭೆ ವೇಳೆ ಅಮಾಯಕರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ಕೇಳಿದಾಗ, "ನಿಜ, ಅನೇಕ ಪ್ರಕರಣಗಳಲ್ಲಿ ಅಮಾಯಕರ ಮೇಲೆ ಕೇಸು ದಾಖಲಿಸಲಾಗಿದೆ. ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆಗಳಲ್ಲಿ ಈ ರೀತಿ ಪ್ರಕರಣ ದಾಖಲಿಸಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದಕ್ಕೆ ನಮ್ಮ ಮೇಲೆ ಎಷ್ಟು ಪ್ರಕರಣ ದಾಖಲಿಸಿದ್ದರು. ರೈತ ಸಂಘ, ಕನ್ನಡ ಸಂಘಟನೆಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ" ಎಂದು ತಿಳಿಸಿದರು.
ಇದನ್ನೂ ಓದಿ: ಬೆಳಗಾವಿಯ ಕುಡಚಿ ಸೇತುವೆ ಮೇಲಿನ ಸಂಚಾರಕ್ಕೆ ಪೊಲೀಸರ ನಿರ್ಬಂಧ
ಉಡುಪಿ ಕಾಲೇಜು ವಿಡಿಯೋ ಪ್ರಕರಣ ರಾಜಕೀಯ ಸ್ವರೂಪ ಪಡೆಯುತ್ತಿರುವ ಬಗ್ಗೆ ಕೇಳಿದಾಗ, "ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಗೃಹಮಂತ್ರಿಗಳಿಂದ ಮಾಹಿತಿ ಪಡೆದ ಬಳಿಕ ಮಾತನಾಡುತ್ತೇನೆ" ಎಂದು ತಿಳಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.