ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ : ಡಿಸಿಎಂ

Attibele fire accident : ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಇಡೀ ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Oct 8, 2023, 04:53 PM IST
  • ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ.
  • ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ.
  • ಡಿಸಿಎಂ ಡಿ.ಕೆ ಶಿವಕುಮಾರ್‌ ಅಧಿಕಾರಿಗೆ ಸೂಚನೆ.
ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ : ಡಿಸಿಎಂ title=

ಅತ್ತಿಬೆಲೆ : ದೀಪಾವಳಿ ಹಬ್ಬ ಹತ್ತಿರದಲ್ಲಿ ಇರುವ ಕಾರಣ ಪಟಾಕಿಗಳನ್ನು ಸಂಗ್ರಹ ಮಾಡಲಾಗುತ್ತಿತ್ತು. ಭವಿಷ್ಯದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ನಿರೂಪಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಮುಖ್ಯಮಂತ್ರಿಗಳ ಜತೆ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಸ್ಥಳ ವೀಕ್ಷಣೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಇಡೀ ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಂಪನಿಗೆ ಬೆಂಕಿ ಇಟ್ಟ ಉದ್ಯೋಗಿಗಳು!

30,000 ಸಾವಿರ ಕೆಜಿಯಷ್ಟು ಪಟಾಕಿ ಸಂಗ್ರಹವಿತ್ತೇ ಎನ್ನುವ ಪ್ರಶ್ನೆಗೆ ಗೋದಾಮಿನಲ್ಲಿ ಎಷ್ಟು ಪ್ರಮಾಣದಲ್ಲಿ ಸಂಗ್ರಹ ಇತ್ತು ಎಂಬುದು ಇನ್ನೂ ಅಂದಾಜಿಗೆ ಸಿಕ್ಕಿಲ್ಲ. ತಮಿಳುನಾಡು ಹಾಗೂ ಕರ್ನಾಟಕ ಎರಡೂ ರಾಜ್ಯಗಳು ಒಟ್ಟಿಗೆ ಕೆಲಸ ಮಾಡುತ್ತಿದ್ದು. ಈಗಾಗಲೇ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News