ಪ್ರಧಾನಿ ಎದುರು ಮಾತಾಡುವ ಧೈರ್ಯವಿಲ್ಲದ ಬಿಜೆಪಿ ನಾಯಕರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆ: ಡಿಕೆಶಿ

Kaveri River water dispute: ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಅಂತಾ ಡಿಕೆಶಿ ತಿಳಿಸಿದರು.

Written by - Zee Kannada News Desk | Last Updated : Sep 15, 2023, 07:48 PM IST
  • ಕಾವೇರಿ ವಿಚಾರವಾಗಿ ಪ್ರಧಾನಿ ಮೋದಿ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ
  • ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗಳಿಗೆ ನಿರಪೇಕ್ಷಣಾ ಪತ್ರ ತರಲು ಬಿಜೆಪಿ ಕೈಯಲ್ಲಿ ಆಗಿಲ್ಲ
  • ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ಕಿಡಿಕಾರಿದ ಡಿಸಿಎಂ ಡಿ.ಕೆ.ಶಿವಕುಮಾರ್
ಪ್ರಧಾನಿ ಎದುರು ಮಾತಾಡುವ ಧೈರ್ಯವಿಲ್ಲದ ಬಿಜೆಪಿ ನಾಯಕರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆ: ಡಿಕೆಶಿ title=
ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ಆಕ್ರೋಶ!

ಬೆಂಗಳೂರು: ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಿಗೆ ಪ್ರಧಾನಿ ಮೋದಿಯವರ ಎದುರು ನಿಂತು ಮಾತನಾಡುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗಿಲ್ಲ. ಕರ್ನಾಟಕಕ್ಕೆ ತೊಂದರೆ ಆಗಿರುವುದೇ ಇಂತಹ ನಾಯಕರಿಂದ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕುಮಾರಕೃಪಾ ಅತಿಥಿಗೃಹದ ಬಳಿ ಶುಕ್ರವಾರ ಮಾತನಾಡಿದ ಅವರು, ‘ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.  

‘ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿಗಳಿಗೆ ನಿರಪೇಕ್ಷಣಾ ಪತ್ರ ತರಲು ಬಿಜೆಪಿ ಕೈಯಲ್ಲಿ ಆಗಿಲ್ಲ. ರಾಜ್ಯದ ಅಭಿವೃದ್ಧಿಗೆ ಅವರಿಂದಲೇ ತೊಂದರೆ ಆಗುತ್ತಿದೆ. ನೀರಿನ ವಿಚಾರದಲ್ಲಿ ರಾಜಕಾರಣ ನಮಗೆ ಬೇಕಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎನ್ನುವುದು ನನ್ನ ಧೋರಣೆ. ಬಿಜೆಪಿಯವರು ನನಗೆ ಬೈಯಲಿ, ಉಗಿಯಲಿ, ಏನು ಬೇಕಾದರೂ ಹೇಳಲಿ, ನಾನು ರಾಜ್ಯದ ಹಿತಾಸಕ್ತಿಗೆ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿಯಿಂದ ಸಂವಿಧಾನದ ಆಶಯಗಳ ಕಗ್ಗೊಲೆ ಮಾಡಿದ ಕಾಂಗ್ರೆಸ್‌ನ ಕರಾಳ ನಿದರ್ಶನಗಳ ಪಟ್ಟಿ ಬಿಡುಗಡೆ!

ಎಲ್ಲಾ ನದಿಗಳ ವ್ಯಾಜ್ಯಗಳು 3 ವರ್ಷಗಳಲ್ಲಿ ಇಥ್ಯರ್ತವಾಗಬೇಕು ಎಂದು ಕೇಂದ್ರ ಸರ್ಕಾರವೇ ಕಾನೂನು ಮಾಡಿದೆ. ಅವರೇ ಎರಡೂ ರಾಜ್ಯಗಳನ್ನು ಕೂರಿಸಿಕೊಂಡು ಸಮಸ್ಯೆ ಬಗೆಹರಿಸಬಹುದಲ್ಲವೇ? ಎಂಥೆಂಥ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ, ಇದು ಆಗುವುದಿಲ್ಲವೇ? ಮೇಕೆದಾಟು ಯೋಜನೆ ಆಗಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ’ವೆಂದು ಅವರು ಹೇಳಿದರು.

‘ಇಂಡಿಯಾ ಸಭೆ ಮಾಡುತ್ತಾರೆ, ನೀರಿನ ವಿಚಾರಕ್ಕೆ ಸಭೆ ನಡೆಸಲು ಆಗುವುದಿಲ್ಲವೇ ಎನ್ನುವ ಪ್ರತಿಪಕ್ಷಗಳ ಪೃಶ್ನೆಗೆ, ‘ನಾವು ಎಲ್ಲಾ ಸಭೆ ಮಾಡಿದ್ದೇವೆ. ಆಯಾ ನಾಯಕರಿಗೆ ಅವರ ರಾಜ್ಯಗಳ ಹಿತಾಸಕ್ತಿ ಮುಖ್ಯ. ಮೇಲೆ ಕುಳಿತಿರುವ ಕೇಂದ್ರ ಸರ್ಕಾರಕ್ಕೆ ವಾಸ್ತಾವಾಂಶ ಗೊತ್ತಿದೆ. ಇಬ್ಬರನ್ನು ಕರೆಸಿ ಮಾತುಕತೆ ನಡೆಸಲಿ’ ಎಂದು ಡಿಕೆಶಿ ಹೇಳಿದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಬಂಧನ ಪ್ರಕರಣ, ಮನೆಗೆ ಬೀಗ ಹಾಕಿ ತೆರಳಿರುವ ತಾಯಿ

ಕಾನೂನು ತಜ್ಞರ ಸಲಹೆಯಂತೆ ನಡೆಯುತ್ತೇವೆ

ಕಾವೇರಿ ನೀರು ಹರಿಸಲು ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರಕ್ಕೆ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸುವ ಮೊದಲು 2 ದಿನ ನೀರು ಹರಿಸಿ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ನಾವು ನೀರು ಬಿಡುವುದಿಲ್ಲವೆಂದು ಹೇಳಿದ್ದೆವು. ಆದರೆ ಸುಪ್ರೀಂಕೋರ್ಟಿನ ಮುಂದೆ ಹೋದಾಗ ಆದೇಶ ಪಾಲನೆ ಮಾಡಲಾಗಿದೆಯೇ ಎಂದು ಪರಿಶೀಲಿಸಲಾಗುತ್ತದೆ. ಪಾಲನೆ ಮಾಡದೆ ಇದ್ದ ಸಂದರ್ಭದಲ್ಲಿ ತೊಂದರೆಯಾಗುತ್ತದೆ ಎನ್ನುವ ಅಭಿಪ್ರಾಯ ಬಂದಿದೆ ಎಂದು ಹೇಳಿದರು.

ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಅಂತಾ ಡಿಕೆಶಿ ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News