DK Shivakumar vs Ashwath Narayan:ʼಬಿಜೆಪಿಯ ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಲೂಟಿಕೋರರ ಪಿತಾಮಹ” ಅಂತಾ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿಪಕ್ಷ ನಾಯಕ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರೆಸಲು ಮುಂದಾದರು. ಈ ವೇಳೆ ಅಶ್ವತ್ಥ್ ನಾರಾಯಣ್ ಅವರು, ʼವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕುʼ ಎಂದು ಪಟ್ಟು ಹಿಡಿದರು.


COMMERCIAL BREAK
SCROLL TO CONTINUE READING

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ ಸಿಎಂ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಷಯದ ಚರ್ಚೆಗೆ ಪ್ರಸ್ತಾಪ ಮಾಡಿದಾಗೆಲ್ಲ ಬಿಜೆಪಿಯ ಮುಖ್ಯಮಂತ್ರಿಗಳು ಸದನದಲ್ಲಿ ಹಾಜರಿರುತ್ತಿದ್ದರೇ? ಅವರು ಗೈರಾಗಿರಲಿಲ್ಲವೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಶ್ವತ್ಥ್ ನಾರಾಯಣ್ ಅವರು ಮಾಡಬಾರದನ್ನು ಮಾಡಿರುವುದಕ್ಕೇ ಜನ ನಮ್ಮನ್ನು ಇಲ್ಲಿ ಕೂರಿಸಿ, ನಿಮ್ಮನ್ನು ಅಲ್ಲಿ ಕೂರಿಸಿ ತೀರ್ಪು ಕೊಟ್ಟಿದ್ದಾರೆ” ಎಂದು ಕುಟುಕಿದರು. 


ಇದನ್ನೂ ಓದಿ: ʻವಾಲ್ಮೀಕಿʼ ಹಗರಣದಲ್ಲಿ ಕೋಟಿ ಕೋಟಿ ಹಣ ಸೀಜ್‌


ಕುಮಾರಸ್ವಾಮಿ ಗೋಡಂಬಿ ದ್ರಾಕ್ಷಿ ಹೇಳಿಕೆಗೆ ಡಿಕೆಶಿ ತಿರುಗೇಟು


ಇನ್ವೆಸ್ಟಿಗೇಷನ್ ಟೀಮ್ ಹೇಳಿಕೆ ಕಡತದಿಂದ ತೆಗೆಯಲು ಮನವಿ


"SIT ಎಂದರೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಎಂದು ಶಾಸಕ ಸುರೇಶ್ ಕುಮಾರ್ ಹೇಳಿದ್ದಾರೆ. ಇದನ್ನು ಕಡತದಿಂದ ತೆಗೆದುಹಾಕಬೇಕು" ಎಂದು ಡಿಕೆಶಿ ಅವರು ಸ್ವೀಕರ್‌ಗೆ ಮನವಿ ಮಾಡಿದರು. ಈ ವೇಳೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದಾಗ, ʼನಾನು ಸ್ಪೀಕರ್ ಅವರ ಬಳಿ ಮನವಿ ಮಾಡುತ್ತಿದ್ದೇನೆ. ನನಗೂ ಈ ಸದನದ ಕಾನೂನು ಗೊತ್ತಿದೆʼ ಎಂದಾಗ, "ನೀವು ಸಿಬಿಐ ಬಗ್ಗೆ ಹೇಳಿದ್ದೀರಲ್ಲ" ಎಂದು ವಿಪಕ್ಷ ನಾಯಕ ಅಶೋಕ್ ಹೇಳಿದರು. “ಮೊದಲು ಹೇಳಿದವರು ನೀವು ಮತ್ತು ದೇವೇಗೌಡರು” ಎಂದು ಶಿವಕುಮಾರ್ ಮತ್ತೆ ತಿರುಗೇಟು ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.