ಬೆಂಗಳೂರು: ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿನ ತಮ್ಮ ಸರ್ಕಾರಿ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಶುಕ್ರವಾರ ಮಾತನಾಡಿದ ಡಿಕೆಶಿ, ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿರುದ್ಧ ಕಿಡಿಕಾರಿದರು.   


COMMERCIAL BREAK
SCROLL TO CONTINUE READING

ಜೆಡಿಎಸ್ ಎಲ್ಲಿದೆ ಎಂದು ಕಾಂಗ್ರೆಸ್ ನಾಯಕರಿಗೆ ತೋರಿಸುತ್ತೇವೆಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ʼಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಆ ಪಕ್ಷ ಇರಬೇಕು, ಪ್ರಬಲ ವಿರೋಧ ಪಕ್ಷವಾಗಬೇಕು ಎಂಬುದು ನಮ್ಮ ಆಸೆ. ಆದರೆ ಅವರೇ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ. ದೇಶದ ಪ್ರಧಾನಿಯಾದವರು, ಎರಡು ಬಾರಿ ಮುಖ್ಯಮಂತ್ರಿಯಾದವರು ಇರುವ ಪಕ್ಷವನ್ನು ವಿಲೀನ ಮಾಡುತ್ತಿರುವುದನ್ನು ನೋಡಿ ಬೇಸರವಾಗುತ್ತಿದೆʼ ಅಂತಾ ವ್ಯಂಗ್ಯವಾಡಿದರು.


ಇದನ್ನೂ ಓದಿ: ಪ್ರಶಾಂತ್​ ಸಂಬರ್ಗಿಗೆ ಜೀವ ಬೆದರಿಕೆ ಸಂದೇಶ..! ಎಫ್​ಐಆರ್​ ದಾಖಲು


ಐಟಿ ಇಲಾಖೆ ನೋಟೀಸ್ ಬಗ್ಗೆ ದೇವೇಗೌಡರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ʼ1,823 ಕೋಟಿ ರೂ. ಕಟ್ಟಬೇಕು ಎಂದು ದೇಶದ ಐಟಿ ಇಲಾಖೆ ಎಐಸಿಸಿಗೆ ನೋಟೀಸ್ ನೀಡಿದೆ. ವಿರೋಧ ಪಕ್ಷಗಳ ಮೇಲೆ ಈ ರೀತಿ ದಾಳಿ ಮಾಡಲಾಗುತ್ತಿದೆ. ದೇವೇಗೌಡರು ಐಟಿ ಅಧಿಕಾರಿಯೇ? ಅವರು ಆರೋಪ ಮಾಡಬೇಕು, ಅದಕ್ಕಾಗಿ ಮಾಡಿದ್ದಾರೆ. ನಾವು ಕೂಡ ಅವರ ಮೇಲೆ ಆರೋಪ ಮಾಡಬಹುದು. ಅವರ ಆರೋಪ ನಿರಾಧಾರ. ನಾವು ಯಾರಿಗೂ ದುಡ್ಡು ಕಟ್ಟುವ ಅಗತ್ಯವಿಲ್ಲ. ನಮ್ಮ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ನಮ್ಮ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂಬುದು ಅವರಿಗೆ ಅರಿವಾಗಿದೆ. ಹೀಗಾಗಿ ಅಸೂಯೆಯಿಂದ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆʼ ಎಂದು ಕುಟುಕಿದರು.


ಡಿ.ಕೆ.ಸುರೇಶ್ ಪಕ್ಷದ ಬಾವುಟ ಬಿಟ್ಟು ಕನ್ನಡ ಬಾವುಟ ಇಟ್ಟುಕೊಂಡಿದ್ದಾರೆಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ʼನಮಗೆ ರಾಷ್ಟ್ರಧ್ವಜ, ಪಕ್ಷದ ಧ್ವಜ, ನಾಡಧ್ವಜದ ಮೇಲೆ ಗೌರವವಿದೆ. ನಮ್ಮ ನಾಡು, ಭೂಮಿ, ನಮಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ರಾಜ್ಯದ ಹಿತ ಕಾಯಲು ನಾವು ಕನ್ನಡಿಗರಿಗೆ ಕರೆ ನೀಡುತ್ತಿದ್ದೇವೆʼ ಎಂದು ಹೇಳಿದರು.


ಇದನ್ನೂ ಓದಿ: Post Office Scheme: ತೆರಿಗೆ ಮುಕ್ತ ಎಫ್ಡಿಗಿಂತ ಉತ್ತಮ ಬಡ್ಡಿ ಕೊಡುತ್ತೇ ಈ ಅಂಚೆ ಕಚೇರಿ ಯೋಜನೆ, ಮಕ್ಕಳ ಹೆಸರಿನಲ್ಲೂ ಖಾತೆ ತೆರೆಯಬಹುದು 


ಬಿಜೆಪಿ ಅಸಮಾಧಾನಿತ ನಾಯಕ ಕರಡಿ ಸಂಗಣ್ಣ ಅವರು ನಿಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಸಂಪರ್ಕ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ʼನಮ್ಮನ್ನು ಅನೇಕ ನಾಯಕರು ಸಂಪರ್ಕ ಮಾಡಿದ್ದಾರೆ. ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ನಮ್ಮ ಪಕ್ಷಕ್ಕೆ ಸೇರಲು ಬಯಸಿ ಬಿಜೆಪಿ ಹಾಗೂ ಜೆಡಿಎಸ್‌ನ ಪ್ರಮುಖ ನಾಯಕರು ಮುಂದಾಗಿದ್ದಾರೆʼ ಎಂದು ಇದೇ ವೇಳೆ ತಿಳಿಸಿದರು.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.