ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ. ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಮತ್ತು ಮಾಜಿ ಸಚಿವ ಎಚ್.ಡಿ.ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಎಚ್‌ಡಿಕೆ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ. 


COMMERCIAL BREAK
SCROLL TO CONTINUE READING

ಕುಮಾರಸ್ವಾಮಿ ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. 


ಇದನ್ನೂ ಓದಿ: ಅನ್ನ, ನೀರಿಗೂ ಗತಿ ಇಲ್ಲದ ಸರ್ಕಾರ: ಬಸವರಾಜ ಬೊಮ್ಮಾಯಿ



ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದು ಡಿಕೆಶಿ ತಿರುಗೇಟು ನೀಡಿದ್ದಾರೆ. 


ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತಾ ಈ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತಾ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣವೆಂದು ಡಿಕೆಶಿ ಸವಾಲು ಹಾಕಿದ್ದಾರೆ. 


ಇದನ್ನೂ ಓದಿ: Lok Sabha Election 2024: ಹಸೆಮಣೆ ಏರುವ ಮುನ್ನ ವೋಟ್​ ಮಾಡಿ ಹಕ್ಕು ಚಲಾಯಿಸಿದ ವಧು!!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.