DK Sivakumar statement on Siddaramaiah: "ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. "ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ನವರು ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದನ್ನು ಸಹಿಸಲು ವಿರೋಧ ಪಕ್ಷಗಳಿಂದ ಸಾಧ್ಯವಾಗುತ್ತಿಲ್ಲ” ಎಂದು ತಿಳಿಸಿದರು.
“ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಇಲ್ಲಿ ನಮ್ಮ ಸರ್ಕಾರ ಇರುವುದನ್ನು ಸಹಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಕನ್ನಡದ ಖಾಸಗಿ ವಾಹಿನಿಯಲ್ಲಿ ಶುರುವಾಗುತ್ತಿದೆ ಕಾಂಟ್ರಾಕ್ಟ್ ಮದುವೆಯ ಕಥೆಯನ್ನೊಳಗೊಂಡ ಹೊಸ ಧಾರಾವಾಹಿ!
“ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪ ಮಾಡುತ್ತಿದ್ದು, ಈ ವಿಚಾರದಲ್ಲಿ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಸರ್ಕಾರದ ಸಚಿವರುಗಳು ಅನೇಕ ಪ್ರಕರಣಗಳ ತನಿಖೆ ಎದುರಿಸುತ್ತಿದ್ದು, ಮೊದಲು ಅವರನ್ನು ಸಚಿವ ಸಂಪುಟದಿಂದ ಕೈಬಿಡಲಿ. ನಂತರ ಈ ಬಗ್ಗೆ ಚರ್ಚೆ ಮಾಡಲಿ” ಎಂದು ತಿಳಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.