ಬೆಂಗಳೂರು: ಕಾಂತರಾಜು ಅವರ ವರದಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಮಗೆ ಬರೆದಿದ್ದಾರೆ ಎನ್ನಲಾದ ಪತ್ರ ಇನ್ನು ತಲುಪಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ವಿಕಾಸಸೌಧದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಉಪಮುಖ್ಯಮಂತ್ರಿಗಳು ಬರೆದಿದ್ದಾರೆ ಎನ್ನಲಾದ ಪತ್ರ ತಲುಪಿದರೆ ಖುದ್ದಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ. ಪತ್ರ ನೋಡದೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದರು.


ಇದನ್ನೂ ಓದಿ: Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಕುಸಿತ..!


ಕಾಂತರಾಜು ಅವರ ವರದಿಯಲ್ಲಿ ಏನಿದೆ ಎಂಬುದೆ ಇನ್ನು ತಿಳಿದಿಲ್ಲ. ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಪ್ರತಿಯೊಂದು ಸಮುದಾಯದ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸಮೀಕ್ಷೆ ನಡೆಸಲಾಗಿದೆ. ಕಾಂತರಾಜು ಅವರ ವರದಿ ಸ್ವೀಕಾರ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು‌ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


ಕಾಂತರಾಜು ವರದಿ ಬಗ್ಗೆ ಕೆಲವೊಂದು ಸಮುದಾಯದಿಂದ ವಿರೋಧ ವ್ಯಕ್ತವಾಗಿದೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವರದಿ ಸ್ವೀಕಾರ ಆಗುವುದಕ್ಕೂ ಮುನ್ನವೇ ವಿರೋಧ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದರು.


ಇದನ್ನೂ ಓದಿ: ರಾಣಿ ಮಹರಾಣಿ, ನಂಜುಂಡಿ ಕಲ್ಯಾಣ ಸಿನಿಮಾನ ತುಂಬಾ ಸರಿ ನೋಡಿದಿನಿ


ಮೂವರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಹೈಕಮಾಂಡ್‌ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.