ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Sep 28, 2023, 04:14 PM IST
  • ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ.
  • ಕರ್ನಾಟಕ ಬಂದ್ ಮಾಡಲು ಅವಕಾಶವಿಲ್ಲ.
  • ಕಾವೇರಿ ಬಂದ್‌ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ ಮಾಹಿತಿ.
ನಾಳೆ ಬಂದ್‌ಗೆ ಅವಕಾಶವಿಲ್ಲ, ಪ್ರತಿಭಟನೆಗೆ ಅಡ್ಡಿಯಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು : ಪ್ರತಿಭಟನೆ ಮಾಡಲು ಯಾರಿಗೂ ನಾವು ಅಡ್ಡಿ ಮಾಡುವುದಿಲ್ಲ. ಆದರೆ ಬಂದ್ ಮಾಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ನಾಳೆ ಸಾವರ್ಜನಿಕರಿಗೆ ರಕ್ಷಣೆ ಕೊಟ್ಟೇ ಕೊಡುತ್ತೇವೆ. ಸುಪ್ರೀಂ ಕೋರ್ಟ್,‌ ಹೈಕೋರ್ಟ್ ಬಂದ್ ವಿಚಾರವಾಗಿ ಒಂದಷ್ಟು ಸೂಚನೆಗಳನ್ನು ನೀಡಿವೆ,‌ ಅವನ್ನು ಪಾಲಿಸಬೇಕು. ದಯವಿಟ್ಟು ಕಾನೂನು ಪಾಲಿಸಿ, ಬಂದ್ ಮಾಡದೆ ಪ್ರತಿಭಟನೆ ಮಾಡಿ ಎಂದು ಜನರಲ್ಲಿ ಅವರು ಮನವಿ ಮಾಡಿದರು.

ಇದನ್ನೂ ಓದಿ: ಇಂಟರ್‌ನೆಟ್‌ನಲ್ಲಿ ನಿಲ್ಲುತ್ತಿಲ್ಲ ನಟಿ ಜ್ಯೋತಿ ರೈ ಅಂದದ ಹಾವಳಿ : ಫೋಟೋಸ್‌ ವೈರಲ್‌

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಾಳೆ : ನಾಳೆ ನಡೆಯುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆಗೆ ಆನ್‌ಲೈನ್ ಬದಲಿಗೆ ಖುದ್ದಾಗಿ ಭಾಗವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ತಮಿಳುನಾಡಿನವರು 11,000 ಸಾವಿರ ಕ್ಯೂಸೆಕ್ಸ್ ನೀರು ಬೇಡಿಕೆ ಇಟ್ಟಿದ್ದು, ರಾಜ್ಯದ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಲಿದ್ದಾರೆ. ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದ್ದಾರೆ. ಈಗ ಸಹಜವಾಗಿ 2,000 ಕ್ಯೂಸೆಕ್ಸ್ ನೀರು ಹೋಗುತ್ತಿರಬಹುದು. ಹಿರಿಯ ಕೃಷಿ ತಜ್ಞರು, ನೀರಾವರಿ ತಂತ್ರಜ್ಞರ ಸಭೆ ಕರೆದಿದ್ದು ಅಲ್ಲಿ ಚರ್ಚೆ ಮಾಡಲಾಗುವುದು. ಯಾರು ಭಾಗವಹಿಸುತ್ತಾರೆ ಎಂದು ಹೆಸರು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ʼವಾಟ್ಸಾಪ್ ಚಾನೆಲ್‌ʼ ಸೃಷ್ಟಿಕರ್ತನನ್ನೇ ಹಿಂದಿಕ್ಕಿದ ಕತ್ರಿನಾ..! ಟಾಪ್‌ 9 ಸೆಲೆಬ್ರಿಟಿ ಲಿಸ್ಟ್‌ ಇಲ್ಲಿದೆ

ನಾಳಿನ ಬೆಳವಣಿಗೆ ನೋಡಿಕೊಂಡು ನ್ಯಾಯಾಲಯಕ್ಕೆ ಹೋಗುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ತಾಂತ್ರಿಕ ಸಮಿತಿಯವರು 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದ್ದಾರೆ. ನಾಳೆ ಪ್ರಾಧಿಕಾರದವರು ಏನು ಸೂಚನೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು ಎಂದು ತಿಳಿಸಿದರು.

ಎಂಎಲ್‌ಸಿ, ಲೋಕಸಭಾ ಚುನಾವಣೆಗೆ ತಯಾರಿ : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಶೀಘ್ರ ಆಯ್ಕೆ ಮಾಡಲು ಸಲಹೆ ಪಡೆಯಲಾಗುತ್ತಿದೆ. ಈಶ್ವರ ಖಂಡ್ರೆ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಎಲ್ಲಾ ಭಾಗದ ನಾಯಕರುಗಳ ಜತೆ ಎಂಎಲ್‌ಸಿ ಚುನಾವಣೆ ಬಗ್ಗೆ ಚರ್ಚೆ ನಡಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ʼಎಡಗೈಯೇ ಅಪಘಾತಕ್ಕೆ ಕಾರಣʼ ವಿಶೇಷ ಪಾತ್ರದಲ್ಲಿ ನಿರೂಪ ಭಂಡಾರಿ

ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಮಾಜಿ ಶಾಸಕರು ಭೇಟಿಯಾಗಿದ್ದರು ಎನ್ನುವ ಪ್ರಶ್ನೆಗೆ, ಮೈತ್ರಿ ವಿಚಾರವಾಗಿ ಬಹಳಷ್ಟು ಜನರಿಗೆ ಸಿಟ್ಟಿದೆ. ಸಿಎಂ ಹಾಗೂ ನಾನು ನಾಳೆ ಈ ವಿಚಾರವಾಗಿ ಮಾತನಾಡುತ್ತೇವೆ ಎಂದರು.

ಹರಿಪ್ರಸಾದ್ ಹಾಗೂ ಮುನಿಯಪ್ಪ ಅವರ ಭೇಟಿ ಬಗ್ಗೆ ಕೇಳಿದಾಗ, "ಬಿ.ಕೆ.ಹರಿಪ್ರಸಾದ್ ಮತ್ತು ಮುನಿಯಪ್ಪ ಅವರು ಲೋಕಸಭೆ ಚುನಾವಣೆಯ ವಿಚಾರವಾಗಿ ಚರ್ಚೆ ನಡೆಸಲು ಬಂದಿದ್ದರು. ಇದೇ ವೇಳೆ ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಿ ಎಂದು ಮುನಿಯಪ್ಪ ಅವರು ಸಲಹೆ ನೀಡಿದರು" ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News