ಬೆಂಗಳೂರು : ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ 10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ಮಾಡಿ ಸಾಂತ್ವನ ಹೇಳಿದರು.


COMMERCIAL BREAK
SCROLL TO CONTINUE READING

ಮೃತಪಟ್ಟ ಬಾಲಕನ ನೇತ್ರವನ್ನು ಕುಟುಂಬದವರು ದಾನ ಮಾಡಿ ಮಾದರಿಯಾಗಿದ್ದಾರೆ.ಬಡತನವಿದ್ದರೂ ಸಮಾಜ ಹಾಗೂ ದೇಶಕ್ಕೆ ಕಾಣಿಕೆ ನೀಡುವ ತೀರ್ಮಾನವನ್ನು ನಾವು ಮೆಚ್ಚಬೇಕು.ಮಗನನ್ನು ಕಳೆದುಕೊಂಡಿರುವ ನೋವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು


ಇದನ್ನೂ ಓದಿ : ಸೇವಾನ್ಯೂನ್ಯತೆ: ಪರಿಹಾರ ನೀಡಲು ಗ್ರಾಹಕರ ಆಯೋಗ ಆದೇಶ


ಈ ಕುಟುಂಬದ ಜತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ.ದಿನೇಶ್ ಗುಂಡೂರಾವ್ ಅವರ ಫೌಂಡೇಶನ್ ವತಿಯಿಂದ ಮೃತ ಬಾಲಕನ ತಂಗಿಯ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು.ಮಾನವೀಯತೆ ದೃಷ್ಟಿಯಿಂದ ಈ ನೆರವು ನೀಡುತ್ತಿದ್ದೇವೆ.ಇದು ನಮ್ಮ ಧರ್ಮ ಎಂದು ಹೇಳಿದ್ದಾರೆ. 


ಬಿಬಿಎಂಪಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು,ಬೇರೆ ಪಾರ್ಕ್ ಹಾಗೂ ಮೈದಾನಗಳ ಪರಿಸ್ಥಿತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ “ಈ ಪ್ರಕರಣದ ವರದಿ ಕೇಳಿದ್ದೇವೆ.ವರದಿ ಬಂದ ಬಳಿಕ ತೀರ್ಮಾನ ಮಾಡುತ್ತೇವೆ.ಬೆಂಗಳೂರಿನ ಬೇರೆ ಕಡೆಗಳಲ್ಲಿ ಗೇಟ್ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.


ಇದನ್ನೂ ಓದಿ : ತನಿಖೆಗೆ ಹೆದರಲ್ಲ; ತನಿಖೆಯನ್ನು ಎದುರಿಸಲು ಸಿದ್ಧ, ಕಾನೂನಾತ್ಮಕ ಹೋರಾಟಕ್ಕೆ ಸಜ್ಜು: ಸಿಎಂ ಸಿದ್ದರಾಮಯ್ಯ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.