ಬಾಗಲಕೋಟೆ: ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ನಗರದಲ್ಲಿ ಇಂದು ಜಿಲ್ಲಾ ಬಿಜೆಪಿ(BJP)ಯಿಂದ ಹಮ್ಮಿಕೊಂಡಿದ್ದ ಜನ ಸೇವಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿದೆ ಎಂದರು.
Cabinet Expansion: ಬಿಎಸ್ ವೈಗೆ ಸಂಪುಟದಲ್ಲಿ 'ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಫಿಕ್ಸ್'..!
ಪಂಚಾಯತ್ ರಾಜ್ ನಲ್ಲಿ ಮೊದಲು ಎರಡು ಹಂತದ ವ್ಯವಸ್ಥೆಯಿತ್ತು. ಜಿಲ್ಲಾ ಪರಿಷತ್ ಮತ್ತು ಮಂಡಲ ಪಂಚಾಯತ್ ವ್ಯವಸ್ಥೆ ಇದ್ದಾಗ ಗ್ರಾಮೀಣ ಅಭಿವೃದ್ದಿಗೆ ಬಹಳಷ್ಟು ಅನುದಾನ, ಶಿಸ್ತುಬದ್ಧ ವ್ಯವಸ್ಥೆಯಿತ್ತು. ರಾಮಕೃಷ್ಣ ಹೆಗಡೆ ಅವರು ಈ ವ್ಯವಸ್ಥೆಯನ್ನು ಇಡೀ ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಜಾರಿಗೊಳಿಸಿದಾಗ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಕೇಂದ್ರದ ತಂಡ ಕಳುಹಿಸಿ ಅಧ್ಯಯನ ಮಾಡಿಸಿದ್ದರು. ಇಂತಹ ವ್ಯವಸ್ಥೆಯನ್ನು ವೀರಪ್ಪ ಮೋಯ್ಲಿ ಕುಲಗೆಡೆಸಿದರು ಎಂದು ಆರೋಪಿಸಿದ್ದಾರೆ.
S.Suresh Kumar: 'ಶಾಲಾ-ಕಾಲೇಜುಗಳ ಪಠ್ಯ ಪುಸ್ತಕಗಳಲ್ಲಿ ಶೇಕಡ 30ರಷ್ಟು ಕಡಿತ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ