ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಸೂಚನೆ
ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು` ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ
ಬೆಂಗಳೂರು: ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್’ಗಳು, ಗೇಮಿಂಗ್ ಜೋನ್’ಗಳು, ಮನರಂಜನಾ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಒಂದು ಲೋಟ ಬಿಸಿನೀರಿಗೆ ಈ ಪುಡಿ ಬೆರೆಸಿ ಕುಡಿಯಿರಿ: 5 ದಿನದಲ್ಲಿ ಸೊಂಟದ ಬೊಜ್ಜು ಕರಗಿ ಬಳುಕುವ ಬಳ್ಳಿಯಂತಾಗೋದು ಗ್ಯಾರಂಟಿ
ಈ ವಿಚಾರವಾಗಿ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಈ ಪತ್ರದಲ್ಲಿ, "ಗುಜರಾತಿನ ರಾಜ್’ಕೋಟ್’ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ. ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಯೇ ಎಂದು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು” ಎಂದು ಆದೇಶ ನೀಡಿದ್ದಾರೆ.
ಇದನ್ನೂ ಓದಿ: ಕನ್ನಡದ ಈ ಸೂಪರ್’ಹಿಟ್ ಸಿನಿಮಾದಲ್ಲಿ ನಟಿಸಿದ್ರು ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ: ಯೋಗರಾಜ್ ಭಟ್ರ ಸಿನಿಮಾ ಅದು!
ಈ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕು. ಬೆಂಗಳೂರಿನಲ್ಲಿ ಗುಜರಾತ್ ನಂತಹ ಯಾವುದೇ ದುರ್ಘಟನೆ ನಡೆಯಬಾರದು" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.