ಚಾಮರಾಜನಗರ: ಉತ್ಕೃಷ್ಟ ಮಟ್ಟದ ಕರಿಕಲ್ಲಿಗೆ ಹೆಸರಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ರಾಜಧನ, ಡಿಎಂಎಫ್ ಸಂಗ್ರಹಣೆ ನಿರೀಕ್ಷೆ ಮಟ್ಟದಲ್ಲಿರದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಹುದ್ದೆಯನ್ನು ರದ್ದು ಪಡಿಸಲಾಗಿದೆ.


COMMERCIAL BREAK
SCROLL TO CONTINUE READING

ಕಳೆದ 20 ರಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧೀನ ಕಾರ್ಯದರ್ಶಿ ಎಸ್.ಸುಮ ಗಣಿ ಇಲಾಖೆ ಉಪ ನಿರ್ದೇಶಕರ ಹುದ್ದೆ ನಿಮ್ನೀಕರಿಸಿ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನಾಗಿ ಪರಿವರ್ತಿಸಲಾಗಿದೆ.


ಇದನ್ನೂ ಓದಿ: Sirsi News: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು


ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಾವಳಿ 2023 ರ ಮಾ.17 ರಿಂದ ಜಾರಿಯಾಗಿದ್ದು 2016 ರ ಆ.12 ರ ಪೂರ್ವದಲ್ಲಿ ಸ್ವೀಕೃತಗೊಂಡು ನಿಯಮ 8(ಬಿ) ರನ್ವಯ ಅನರ್ಹಗೊಂಡ ಅರ್ಜಿಗಳನ್ನು ಕಲ್ಲು ಗಣಿ ಗುತ್ತಿಗೆಗೆ ಮಂಜೂರಾತಿಗಾಗಿ ಪರಿಗಣಿಸಬೇಕಾಗಿದ್ದು ಕೋಲಾರ, ಚಿಕ್ಕಬಳ್ಳಾಪುರ,ಬಳ್ಳಾರಿ ಜಿಲ್ಲೆಗಳಲ್ಲಿ ಕಲ್ಲು ಗಣಿ ಗುತ್ತಿಗೆ ಮಂಜೂರಾತಿ ಅರ್ಜಿಗಳು,ದಕ್ಷಿಣ ಕನ್ನಡ,ಬೆಂಗಳೂರು ಗ್ರಾಮಾಂತರ ಹಾಗು ಚಾಮರಾಜನಗರ ಜಿಲ್ಲೆಗಳಿಗಿಂದ ಹೆಚ್ಚಿನ ಸಂಖ್ಯೆಯಲ್ಲಿದ್ದು ವಿಲೇವಾರಿಗೆ ಕಾರ್ಯದೊತ್ತಡ ಹೆಚ್ಚಾಗುವ ಸಾದ್ಯತೆ ಇರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.


ಬೆಂಗಳೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡದ ಉಪ ನಿರ್ದೇಶಕರ ಹುದ್ದೆಗಳು ಹಿರಿಯ ಭೂ ವಿಜ್ಞಾನಿ ಹುದ್ದೆಗಳಾಗಿ ಬದಲಾದರೇ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬಳ್ಳಾರಿ ಜಿಲ್ಲೆಯ ಹಿರಿಯ ಭೂ ವಿಜ್ಞಾನಿ ಹುದ್ದೆಯನ್ನು ಉನ್ನತೀಕರಿಸಿ ಉಪ ನಿರ್ದೇಶಕ ಹುದ್ದೆಗಳಾಗಿ ಬದಲಿಸಲಾಗಿದೆ.


ಇದನ್ನೂ ಓದಿ: Lok Sabha Election 2024: ಡಿಕೆ ಬದ್ರರ್ಸ್‌ ವಿರುದ್ಧ ʼಕುಕ್ಕರ್‌ʼ ಹಂಚಿಕೆ ಆರೋಪ ಮಾಡಿದ ನಿಖಿಲ್! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.