ನಮ್ಮ ಮೆಟ್ರೋ ಕಾಮಗಾರಿಗೆ ಡೆಡ್ ಲೈನ್ ಫಿಕ್ಸ್ !
ಬಿಎಂಆರ್ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನಮ್ಮ ಮೆಟ್ರೋ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ
ಬೆಂಗಳೂರು: ಬಿಎಂಆರ್ಸಿಎಲ್ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ನಮ್ಮ ಮೆಟ್ರೋ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ
ಇದೆ ವೇಳೆ ಮೆಟ್ರೋ ಕಾಮಗಾರಿ ವಿಳಂಬ ಆರೋಪದ ಬಗ್ಗೆ ಕೇಳಿದಾಗ, ‘ಇಂದಿನ ಚರ್ಚೆಯಲ್ಲಿ ಅಧಿಕಾರಿಗಳು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ರಾತ್ರಿ ವೇಳೆ ಈ ಕಾಮಗಾರಿಗಳು ನಡೆಯುತ್ತಿವೆ. ಹಗಲಲ್ಲಿ ಸಿಮೆಂಟ್, ಸಾಮಗ್ರಿ ತಲುಪಿಸಲು ಆಗುತ್ತಿಲ್ಲ. ಈ ವಿಚಾರವಾಗಿ ಪೊಲೀಸರ ಜತೆ ಸಭೆ ಮಾಡಬೇಕು. ಅದನ್ನು ಮಾಡುತ್ತೇನೆ. ಈ ವಿಚಾರದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಹೇಳಿದರು.
ಇದನ್ನೂ ಓದಿ: "ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ"
ಬೆಂಗಳೂರಿನ ಶಾಂತಿನಗರದಲ್ಲಿರುವ ಬಿಎಂಆರ್‌ಸಿಎಲ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಸೇವೆ ಸುಧಾರಣೆಗಾಗಿ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದೆ. ನಾನೂ ಕೂಡ ಅನೇಕ ಬಾರಿ ನಮ್ಮ ಮೆಟ್ರೋದಲ್ಲಿ ಓಡಾಡಿದ್ದು, ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಯನ್ನು ಒದಗಿಸುತ್ತಿದೆ. ರಾತ್ರಿ 11 ಗಂಟೆ ನಂತರವೂ ಸೇವೆಯನ್ನು ವಿಸ್ತರಿಸಬೇಕೆನ್ನುವ ಸಲಹೆಗಳು ಕೇಳಿಬರುತ್ತಿವೆ. ರೈಲು ಓಡಾಟದ ಖರ್ಚು ಕಳೆದು 6 ಕೋಟಿ ಲಾಭ ಬರುತ್ತಿದೆ. ಜಾಹೀರಾತಿನಿಂದಲೂ ಸಾಕಷ್ಟು ಲಾಭ ಬರುತ್ತಿದೆ. ರಿಯಾಯಿತಿ ದರದಲ್ಲಿ ವಿದ್ಯುತ್ ದೊರೆಯುತ್ತಿದ್ದರೂ ಗ್ರೂಪ್ ಕ್ಯಾಪ್ಟೀವ್ ಮಾದರಿಯನ್ನು ಅನುಸರಿಸಿ ವಿದ್ಯುತ್ ವೆಚ್ಚ ಕಡಿಮೆ ಮಾಡುವಂತೆ ಸಲಹೆ ನೀಡಿದ್ದೇನೆ. ನಮ್ಮ ಮೆಟ್ರೋ ಕಾಮಗಾರಿಗಳು ರಾತ್ರಿ ವೇಳೆ ಮಾತ್ರ ನಡೆಯುವ ಕಾರಣ ಮಂದಗತಿಯಲ್ಲಿ ಸಾಗುತ್ತಿದೆ. ಕಾಮಗಾರಿಯ ವೇಗವನ್ನು ಹೇಗೆ ಬದಲಿಸಬೇಕೆನ್ನುವ ಕುರಿತು ಚರ್ಚಿಸಲಾಯಿತು. ಸರ್ಜಾಪುರ- ಹೆಬ್ಬಾಳ ಮೆಟ್ರೋ ಮಾರ್ಗ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಕೇಳಿದ್ದೇನೆ. ಅಲ್ಲದೇ ಮುಂದಿನ ಹಂತದಲ್ಲಿ ಯಾವ ಮಾರ್ಗದಲ್ಲಿ ಮೆಟ್ರೋ ಸಂಚರಿಸಿದರೆ ಸೂಕ್ತ ಎಂಬುದರ ಬಗ್ಗೆ ಸಮೀಕ್ಷೆ ನಡೆಸುವಂತೆ ತಿಳಿಸಿದ್ದೇನೆ." ಎಂದು ಅವರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.