ಡಿ. 5 ರಂದು `ಕರ್ನಾಟಕ ಬಂದ್` ಪಕ್ಕಾ: ವಾಟಾಳ್ ನಾಗರಾಜ್
ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ರ ಕರ್ನಾಟಕ ಬಂದ್
ಬೆಂಗಳೂರು: ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 5 ರ ಕರ್ನಾಟಕ ಬಂದ್ ಶತಸಿದ್ಧ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಡಿ. 5 ರಂದು ಕರ್ನಾಟಕ ಬಂದ್(Karnataka Bandh) ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ವಾಟಾಳ್ ನಾಗರಾಜ್ ಅವರು ವಿವಿಧ ಸಂಘಟನೆಗಳ ಜೊತೆಗೆ ಮಹತ್ವದ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡುವುದು ಖಚಿತ. ಇದನ್ನು ತಡೆಯಲು ಸಾಧ್ಯವಿಲ್ಲ. ಡಿಸೆಂಬರ್ 5 ರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಸುತ್ತೇವೆ ಎಂದರು.
ಹೈಕಮಾಂಡ್‌ಗೆ ಸಡ್ಡು ಹೊಡೆದ್ರಾ ಸಿಎಂ ಬಿಎಸ್‌ವೈ..!?
ದಲಿತ ಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಡಿಸೆಂಬರ್ 5 ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು, ಎಲ್ಲಾರು ಕರ್ನಾಟಕ ಬಂದ್ ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
India vs Australia: #ಕನ್ನಡದಲ್ಲಿ_ಕಾಮೆಂಟರಿ ನೀಡಲು ಟ್ವಿಟರ್ ಅಭಿಯಾನ