2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ: ಎಚ್ಡಿಕೆ
ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ ಅಂತಾ ಹೇಳಿದ್ದಾರೆ.
ಬೆಂಗಳೂರು: 2023ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ.
‘2023ರಲ್ಲಿ ಜೆಡಿಎಸ್ ಸರ್ಕಾರ(JDS Government) ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ’ ಅಂತಾ ಹೇಳಿದ್ದಾರೆ.
Mekedatu project: ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ
Mekedatu Project: ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!- ಬಿಜೆಪಿ
‘ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ? ಇದೆಲ್ಲವೂ ಸರ್ಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲವೆಂದು ಭಾವಿಸಬೇಕಾಗುತ್ತದೆ’ ಅಂತಾ ಕುಮಾರಸ್ವಾಮಿ(HD Kumaraswamy)ಟ್ವೀಟ್ ಮಾಡಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.