ರಾಜ್ಯದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಬಳಕೆಗೆ ಅವಕಾಶ ನೀಡಲು ತೀರ್ಮಾನ

ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Written by - Zee Kannada News Desk | Last Updated : Feb 4, 2022, 05:38 PM IST
  • ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಪರಿಶೀಲನೆ ಸಭೆ ನಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಆಸನ ಬಳಕೆಗೆ ಅವಕಾಶ ನೀಡಲು ತೀರ್ಮಾನ  title=

ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳ ಪರಿಶೀಲನೆ ಸಭೆ ನಡೆದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಇದನ್ನೂ ಓದಿ-Rashmika ಗೆ ಟ್ರೋಲ್‌ ಕಾಟ..! ʼಲೆಜೆಂಡ್‌ʼ ಬಾಯಲ್ಲಿ ಕನ್ನಡ ಕವನ..! 

ಡಿಸೆಂಬರ್ ಕೊನೆ ವಾರದಲ್ಲಿ ಒಮಿಕ್ರಾನ್ ವೈರಾಣು ಹರಡುವಿಕೆ ಹೆಚ್ಚಾದ ಬಳಿಕ ಕೆಲ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಯಿತು. ಕೋವಿಡ್ ಸ್ಥಿತಿಗತಿ, ಆಸ್ಪತ್ರೆ ದಾಖಲಾತಿ ಅವಲೋಕಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗಿತ್ತು. ಜನವರಿ 15 ರಿಂದಲೇ ಈ ಮಾರ್ಗಸೂಚಿಯಲ್ಲಿ ಕೆಲ ರಿಯಾಯಿತಿಗಳನ್ನು ನೀಡಲು ಆರಂಭಿಸಲಾಗಿತ್ತು. ಚಿತ್ರಮಂದಿರ, ಜಿಮ್, ಯೋಗ ಕೇಂದ್ರ, ಸ್ವಿಮ್ಮಿಂಗ್ ಪೂಲ್ ನಲ್ಲಿ 50% ರಷ್ಟು ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಈ ನಿಯಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಇದನ್ನೂ ಓದಿ-ಕೇಂದ್ರ ನೌಕರರಿಗೆ ಕಾದಿದೆ ಅದೃಷ್ಟ : DA ಹೆಚ್ಚಳದ ಜೊತೆ ಸಿಗಲಿದೆ ₹2,32,152 - ಲೆಕ್ಕಾಚಾರ ನೋಡಿ

ಜನವರಿಯಲ್ಲಿ ಆಸ್ಪತ್ರೆಗಳಲ್ಲಿ 5-6% ಆಸ್ಪತ್ರೆ ದಾಖಲಾತಿ ಇತ್ತು. ಈಗ ಇದು 2% ಗೆ ಇಳಿಕೆಯಾಗಿದೆ ಎಂಬ ಅಂಶ ಗಮನಿಸಲಾಗಿದೆ. ಈ ನಿಯಮ ಹೇರಿದ್ದರಿಂದ ಚಿತ್ರಮಂದಿರಗಳ ಮಾಲೀಕರು, ನಿರ್ಮಾಪಕರು ಹಾಗೂ ಈ ಉದ್ಯಮದಲ್ಲಿರುವವರಿಗೆ ನಷ್ಟವಾಗಿದೆ. ಚಿತ್ರರಂಗದ ಅಭಿಮಾನಿಗಳು, ಉದ್ಯಮದಲ್ಲಿ ತೊಡಗಿಸಿಕೊಂಡವರ ನಿರೀಕ್ಷೆಯನ್ನು ಗಮನದಲ್ಲಿರಿಸಿ ಈ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

ಇದೇ ರೀತಿ ಜಿಮ್ ಮತ್ತು ಈಜುಕೊಳಗಳಲ್ಲೂ ಶೇ.100 ರಷ್ಟು ಬಳಕೆಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಮುನ್ನಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಚಿತ್ರ ವೀಕ್ಷಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವೀಕ್ಷಿಸುವಾಗ ಒಳಗೆ ಆಹಾರ ಸೇವಿಸಲು ಅವಕಾಶ ನೀಡಬಾರದು ಎಂದು ಸೂಚಿಸಲಾಗುವುದು. ಈ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಅಧಿಕಾರಿಗಳು ಯಾವುದೇ ವೇಳೆಯಲ್ಲಿ ಪರಿಶೀಲನೆ ಮಾಡುತ್ತಾರೆ. ಈ ನಿಯಮಗಳನ್ನು ಪಾಲಿಸದಿದ್ದರೆ ಚಿತ್ರಮಂದಿರಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕರ್ನಾಟಕದ ಸೂಪರ್ ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ ತಯಾರಿ ನಡೆಸುತ್ತಿದ್ದೆಯಾ ರಾಜ್ಯ ಸರ್ಕಾರ?

ಯಾವುದೇ ವ್ಯಕ್ತಿ ಈ ಸ್ಥಳಗಳಿಗೆ ಪ್ರವೇಶಿಸುವ ಮುನ್ನ ಕೋವಿಡ್ ನ ಎರಡೂ ಡೋಸ್ ಲಸಿಕೆ ಪಡೆದಿರಬೇಕು. ಅಂತಹವರಿಗೆ ಮಾತ್ರ ಅವಕಾಶ ನೀಡಬೇಕೆಂದು ಸೂಚಿಸಲಾಗುತ್ತದೆ. ಈ ಕುರಿತ ಮಾರ್ಗಸೂಚಿಯನ್ನು ಪ್ರಕಟಿಸಲಾಗುವುದು ಎಂದರು.

ಸರ್ಕಾರ ನಿಯಮಗಳನ್ನು ಹಿಂಪಡೆಯುತ್ತಿದೆ ಎಂದಾಕ್ಷಣ ಸಾರ್ವಜನಿಕರು ಮೈ ಮರೆಯಬಾರದು. ಮುಂದೆಯೂ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಕೋವಿಡ್ ಇರುವಾಗಲೂ ಹೇಗೆ ಸೂಕ್ತ ನಡವಳಿಕೆಗಳನ್ನು ಪಾಲಿಸಬೇಕೆಂದು ಜನರಿಗೆ ತಿಳಿದಿದೆ. ಯಾರಿಗೂ ಆರ್ಥಿಕ ನಷ್ಟವಾಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಇದನ್ನೂ ಓದಿ-Pots Office ಈ ಯೋಜನೆಯಲ್ಲಿ ₹150 ಉಳಿತಾಯ ಮಾಡಿ ₹20 ಲಕ್ಷ ಲಾಭ ಪಡೆಯಿರಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News