ಹುಬ್ಬಳ್ಳಿ: ಹೊಸ ಮತ್ತು ನವೀಕರಿಸಬಹುದಾದ ಇಂಧನ ಶಕ್ತಿ ಬಳಸಿ ಭಾರತದಲ್ಲಿ 2030ರ ವೇಳೆಗೆ ಇಂಧನ ಅಗತ್ಯತೆಯನ್ನು ಶೇ.50ಕ್ಕೆ ಇಳಿಸಲು ಉದ್ದೇಶಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಕರೆಯ ಮೇರೆಗೆ "ಏಕ್ ಪೇಡ್ ಮಾ ಕೆ ನಾಮ್" ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.


COMMERCIAL BREAK
SCROLL TO CONTINUE READING

ಹೊಗೆ ಉಗುಳುವಿಕೆ ನಿಗ್ರಹಿಸಲು ಕೇವಲ 10 ವರ್ಷದಲ್ಲಿ ಭಾರತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು. ಇಂಧನ ಅಗತ್ಯವನ್ನು ಶೇ.50ಕ್ಕೇ ಇಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ಮಶೀನ್ ಟೂಲ್ ವಲಯದ ಉತ್ಕರ್ಷಕ್ಕೆ ಒತ್ತು: ರಾಜ್ಯ ಸರ್ಕಾರದ ಮಹತ್ವದ ಸಭೆ


ಜಾಗತಿಕ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಗೆ ಉಗುಳುವಿಕೆಯ ನಿಗ್ರಹ ಹಾಗೂ ಹಸಿರನ್ನು ಹೆಚ್ಚಿಸಿ ಪರಿಸರ ಸಂರಕ್ಷಣೆಯಲ್ಲಿ ಭಾರತ ಇಂದು ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.


ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಭೂಮಿ ತಾಯಿಯನ್ನು ರಕ್ಷಿಸುವ ಸಲುವಾಗಿ ಪ್ರತಿಯೊಬ್ಬರೂ ಹೆತ್ತ ತಾಯಿ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದು ಕರೆ ನೀಡಿದರು.


ಈ ಅಭಿಯಾನದಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರೂ ತಾಯಿ ಹೆಸರಿನಲ್ಲಿ ಗಿಡ ನೆಡುವ ಮೂಲಕ "ಏಕ್ ಪೇಡ್ ಮಾ ಕೆ‌ ನಾಮ್" ಅಭಿಯಾನ ಯಶಸ್ವಿಗೊಳಿಸಿದರು.


ಎಲ್ಲರೂ ಈ ಅಭಿಯಾನದಲ್ಲಿ ಸಕ್ರಿಯವಾಗಿ ತೊಡಗಿ ತಾಯಿಗಾಗಿ ಒಂದು ವೃಕ್ಷ ನೆಡೋಣ. ಭೂಮಿ ತಾಯಿ ಮಡಿಲಿನಲ್ಲಿ ನಮ್ಮ ತಾಯಿಗಾಗಿ ಒಂದು ವೃಕ್ಷ ನೆಟ್ಟು ಪೋಷಿಸಿ ನಮ್ಮ ಜವಾಬ್ದಾರಿ ನಿರ್ವಹಿಸುವ ಮೂಲಕ ತಾಪಮಾನ ಏರಿಕೆ ನಿಗ್ರಹಿಸಲು ಪ್ರಯತ್ನಿಸೋಣ ಎಂದು ಹೇಳಿದರು.


ಇದನ್ನೂ ಓದಿ: "ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ"


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.