ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಎಲ್ಲಾ  224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಅಭ್ಯರ್ಥಿಗಳನ್ನು ಘೋಷಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಗರಿಗೆದರಿದ ಟಿಕೆಟ್ ಹಂಚಿಕೆ ಸಿದ್ದತೆ
ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆ ಮೇ.12 ಕ್ಕೆ ನಿಗದಿಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ಸಿದ್ಧತೆ ಗರಿಗೆದರಿದೆ. ಟಿಕೆಟ್ ಹಂಚಿಕೆ ಸಂಬಂಧ ಇಂದು ದಿನವಿಡೀ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಸೇರಿದಂತೆ ಪ್ರಮುಖರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಒನ್-ಟು-ಒನ್ ಮಾತುಕತೆ ನಡೆಸಿ ಪಟ್ಟಿ ಸಿದ್ಧಪಡಿಸಲಾಗುವುದು. ಕಾಂಗ್ರೆಸ್ ಪಕ್ಷದಲ್ಲಿ ನಾವೆಲ್ಲರೂ ಮಹಿಳೆಯರಿಗೆ ಮತ್ತು ಯುವ ಪೀಳಿಗೆಯ ಸಬಲೀಕರಣಕ್ಕೆ ಪ್ರಾಧಾನ್ಯತೆ ನೀಡಿದ್ದೇವೆ. ಆವಿಷ್ಕಾರ ಮತ್ತು ಕರ್ನಾಟಕದ ಅಭಿವೃದ್ಧಿ ಇದರಿಂದ ಸುಲಭವಾಗಿ ಸಾಧ್ಯವಾಗುತ್ತದೆ. ಸಹಜವಾಗಿ ಇದು ಮುಂಬರುವ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲೂ ಪ್ರತಿಫಲಿಸಲಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.


ಸಭೆಯಲ್ಲಿ ಯಾವ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ? ಹಾಲಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಯಾವ ರೀತಿ ಕೆಲಸ ಮಾಡಿದ್ದಾರೆ? ಕೆಲಸ ಮಾಡದೆ ಇರುವ ಶಾಸಕರು ಯಾರು? ಆಯಾ ಕ್ಷೇತ್ರಾವಾರು ಜನರೊಂದಿಗೆ ಸಂಪರ್ಕ ಹೊಂದಿರುವ ನಾಯಕರುಗಳು ಯಾರು? ಯಾವ ಕ್ಷೇತ್ರಗಳಲ್ಲಿ ಬೇರೆ ಪಕ್ಷಗಳ ಶಾಸಕರ ಪ್ರಭಾವ ಹೆಚ್ಚಿದೆ? ಅದರ ಪ್ಲಸ್ ಮತ್ತು ಮೈನಸ್ ಅಂಶಗಳೇನು? ಎನ್ನುವುದರ ಪೂರ್ಣ ಮಾಹಿತಿಯನ್ನು ಕಲೆಹಾಕಿ ಹೈಕಮಾಂಡ್ ಗೆ ನೀಡಲು ಕೈ ಪಡೆ ಸಿದ್ದತೆ ನಡೆಸಿದೆ. 


ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.12ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ. 15ಕ್ಕೆ ಚುನಾವಣಾ ಫಲಿತಾಂಶ ಹೊರಬೀಳಲಿದೆ.