ಬೆಂಗಳೂರು: ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ. 


COMMERCIAL BREAK
SCROLL TO CONTINUE READING

ನಿಗದಿತ ಸಮಯಕ್ಕೂ ಮಳೆ ಬಂದಿಲ್ಲ. ಮಳೆ ಬಾರದ ಕಾರಣ ರೈತರು ಭಿತ್ತನೆ ಬೀಜಗಳನ್ನು ಹಾಕಿಲ್ಲ. ಜುಲೈ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿದೆ. ಆದರೆ, ಎಲ್ಲ ಕಡೆಯೂ ಮಳೆಯಾಗಿಲ್ಲ


ಬಹಳಷ್ಟು ಜನರು ಮೊದಲ ಸಾರಿ ಬಿತ್ತನೆ ಮಾಡಿದ್ದಾರೆ. ನಂತರ ಎರಡನೇ ಬಾರಿಗೂ ಬಿತ್ತನೆ ಮಾಡಿದ್ದಾರೆ. ಮೊಳಕೆ ಬಂದಿಲ್ಲ. ಇದುವರೆಗೂ 7 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಬೇಕಿತ್ತು ಆದರೆ ಮಳೆ ಇಲ್ಲದೇ ಬರೀ 1 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಬಿತ್ತನೆ ಮಾಡಲಾಗಿದೆ  ಸರ್ಕಾರ ಇದನ್ನು ಬರಗಾಲ ಎಂದು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. 


ಇದನ್ನೂ ಓದಿ-ಘಟಬಂಧನ್ ಕಟ್ಟುವುದರಲ್ಲಿನ ಆತುರ, ರೈತನ ಬದುಕು ಕಟ್ಟುವುದರಲ್ಲಿಲ್ಲ: ಕಾಂಗ್ರೆಸ್ ವಿರುದ್ಧ ಎಚ್‍ಡಿಕೆ ಕಿಡಿ


ಕುಡಿಯುವ ನೀರಿಗಾಗಿ ಸರ್ಕಾರ ಸಿಇಒ ಗಳಿಗೆ ಕೊಟ್ಟ ಹಣ ಸಾಲುವುದಿಲ್ಲ. ಪ್ರತಿ ಕ್ಷೇತ್ರಗಳಿಗೂ ಒಂದೊಂದು ಕೋಟಿ ಅನುದಾನ ಕೊಡಬೇಕು ಎಂದರು.


ರೈತರ ಆತ್ಮಹತ್ಯೆ ಬಗ್ಗೆ ಕೃಷಿ ಸಚಿವರು ಲಘುವಾಗಿ ಮಾತನಾಡಿದ್ದಾರೆ. ಹಿಂದಿನ ವರ್ಷ ರೈತರ ಸಾವು ಇಷ್ಟಾಯಿತು, ಅಷ್ಟಾಯ್ತು ಅನ್ನುವುದು ಸರಿಯಲ್ಲ. ಅಂಕಿ ಅಂಶಗಳ ಮೂಲಕ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡುವುದು ಸರೀನಾ..? ನಿರ್ಲಕ್ಷ್ಯವಾಗಿ, ಬೇಜವಬ್ದಾರಿಯ ಹೇಳಿಕೆ ಸರಿಯಲ್ಲ. ಇದರ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಆಗ್ರಹಿಸಿದರು.


ಇದನ್ನೂ ಓದಿ-ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.