ದೀಪಕ್ ರಾವ್ ಹತ್ಯೆ: ರಾಜನಾಥ್ ಸಿಂಗ್ ಭೇಟಿಯಾದ ರಾಜ್ಯ ಬಿಜೆಪಿ ಸಂಸದರ ನಿಯೋಗ

ಸಂಸತ್‌ ಭವನದಲ್ಲಿರುವ ಕೇಂದ್ರ ಗೃಹ ಸಚಿವರ ಕಚೇರಿಯಲ್ಲಿ ರಾಜನಾಥ್ ಸಿಂಗ್ ಭೇಟಿ ಮಾಡಿದ ನಿಯೋಗ.

Last Updated : Jan 4, 2018, 03:29 PM IST
ದೀಪಕ್ ರಾವ್ ಹತ್ಯೆ: ರಾಜನಾಥ್ ಸಿಂಗ್ ಭೇಟಿಯಾದ ರಾಜ್ಯ ಬಿಜೆಪಿ ಸಂಸದರ ನಿಯೋಗ title=

ನವದೆಹಲಿ: ಬುಧವಾರ ಮಂಗಳೂರಿನಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಸಂಸದರ ನಿಯೋಗ ಕೊಲೆ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸುವಂತೆ ಕೋರಿ ಮನವಿ ಸಲ್ಲಿಸಿದೆ.

ಸಂಸತ್‌ ಭವನದಲ್ಲಿರುವ ಕೇಂದ್ರ ಗೃಹ ಸಚಿವರ ಕಚೇರಿಯಲ್ಲಿ ಇಂದು ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ರಾಜ್ಯ ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಷಿ, ಪಿ.ಸಿ. ಮೋಹನ್, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ, ನಳೀನ್ ಕುಮಾರ್ ಕಟೀಲ್ ಮತ್ತಿತರರು ಕೊಲೆ‌ ಪ್ರಕರಣವನ್ನು ಎನ್ಐಎ ಯಿಂದ ತನಿಖೆ ಮಾಡಿಸಬೇಕೆಂದು ಒತ್ತಾಯಿಸಿದ್ದಾರೆ.

ರಾಜನಾಥ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ, ಪ್ರಕರಣವನ್ನು ಎನ್ಐಎ ಗೆ ವಹಿಸುವಂತೆ ಮನವಿ ಮಾಡಿದ್ದೇವೆ. ಪರೇಶ್ ಮೆಸ್ತಾ ಪ್ರಕರಣ ಮುಚ್ಚಿಹಾಕಲಾಗಿದೆ. ಈ ಪ್ರಕರಣವೂ ಅದೇ ರೀತಿ ಆಗಬಾರದು ಎಂದು ಹೇಳಿದರು.

 

Trending News