ಅನಂತ ಅಸ್ತಂಗತ: ರಾಜಕಾರಣ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು- ಸಿಎಂ

ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಶೋಕ.  

Last Updated : Nov 12, 2018, 07:53 AM IST
ಅನಂತ ಅಸ್ತಂಗತ: ರಾಜಕಾರಣ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು- ಸಿಎಂ title=

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದು, ರಾಜಕಾರಣ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ ನೀಡುತ್ತಿದ್ದ ವ್ಯಕ್ತಿ ಅವರಾಗಿದ್ದರು. ಇಂದು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ಅನಂತ್ ಕುಮಾರ್ ಬೆಂಗಳೂರಿಗರ ಕಣ್ಮಣಿ:
ಮೌಲ್ಯಾಧಾರಿತ ರಾಜಕಾರಣದಲ್ಲಿ ನಂಬಿಕೆಯಿಟ್ಟಿದ್ದ ಅನಂತ್ ಕುಮಾರ್ ಸಂಸದರಾಗಿ, ಕೇಂದ್ರ ಸಚಿವರಾಗಿ ದೇಶಕ್ಕೆ ನೀಡಿದ ಕೊಡುಗೆ ಆನನ್ಯವಾದದ್ದು. ತಮ್ಮ ಜನಪರ ಕಾಳಜಿ, ಕಾರ್ಯಚಟುವಟಿಕೆಗಳಿಂದಾಗಿ ಬೆಂಗಳೂರಿಗರ ಕಣ್ಮಣಿ ಆಗಿದ್ದರು ಎಂದು ಮುಖ್ಯಮಂತ್ರಿ ಅನಂತ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲಿ.  ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ಸಿಎಂ ತಿಳಿಸಿದ್ದಾರೆ.

Trending News