ಯತ್ನಾಳ್ ವಿರುದ್ಧ ಮಾನನಷ್ಟ ಪ್ರಕರಣ :ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ

ಮಾನನಷ್ಟ ಪ್ರಕರಣ ಕ್ಕೆ ತಡೆ ಕೋರಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.ಇದೇ ವೇಳೆ ಕೀಳು ಅಭಿರುಚಿಯ ಹೇಳಿಕೆಯನ್ನ ಪ್ರಶ್ನಿಸಿ  ಶಾಸಕರನ್ನು ತರಾಟೆಗೆ ತೆಗೆದುಕೊಂಡಿದೆ.   

Written by - Ranjitha R K | Last Updated : Sep 19, 2024, 04:36 PM IST
  • ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಕುರಿತ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯತ್ನಾಳ್
  • ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದ ಗುಂಡೂರಾವ್ ಪತ್ನಿ ಟಬು ರಾವ್
  • ಪ್ರಕರಣಕ್ಕೆ ತಡೆ ನೀಡುವಂತೆ ಹೈಕೋರ್ಟ್ ಮೊರೆ ಹೋಗಿದ್ದ ಶಾಸಕ ಯತ್ನಾಳ್ ಗೆ ಮುಖಭಂಗ
ಯತ್ನಾಳ್ ವಿರುದ್ಧ ಮಾನನಷ್ಟ ಪ್ರಕರಣ :ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ  title=

ಬೆಂಗಳೂರು : ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ಅವರನ್ನು ಹೈಕೋರ್ಟ್ ನಾಗಪ್ರಸನ್ನ ಅವರ ಪೀಠ ತರಾಟೆಗೆ ತೆಗೆದುಕೊಂಡಿದೆ.ಕುಟುಂಬ ಹಾಗೂ ವೈಯಕ್ತಿಕ ನಿಂದನೆ ಹೇಳಿಕೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು. 

ಪ್ರಕರಣಕ್ಕೆ ತಡೆ ಕೋರಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು.ಪ್ರಕರಣವನ್ನ ಆಲಿಸಿದ ಜಸ್ಟಿಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು.ಅಲ್ಲದೇ ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನ ಪ್ರಶ್ನಿಸಿದರು.ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ ಎಂದು ಪ್ರಶ್ನಿಸಿದರು.ಹೇಳಿಕೆ ನೀಡಿದ್ದನ್ನ ಯತ್ನಾಳ್ ಪರ ವಕೀಲ ಒಪ್ಪಿಕೊಂಡರು. 

ಇದನ್ನೂ ಓದಿ : ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ, ಸರ್ಕಾರದ ಗೊಡ್ಡು ಬೆದರಿಕೆಗೆ ಹೆದರಲ್ಲ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಯವರು,ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವೈಯಕ್ತಿಕ ತ್ಯೇಜೋವಧೆಗೆ ನೀವು ಏಕೆ ಇಳಿದಿರಿ.ಇತ್ತಿಚೆಗೆ ಈ ರೀತಿಯ ಹೇಳಿಕೆಗಳು ಮಾಮೂಲಾಗಿವೆ.ಒಂದು ಸಮುದಾಯದ ವಿರುದ್ಧ ಈ ರೀತಿ ಪದಬಳಕೆ ಸರಿಯಲ್ಲ ಎಂದು ಟೀಕಿಸಿದರು.ಒಬ್ಬರು ಪತ್ನಿ ಮುಸ್ಲಿಂ ಆಗಿದ್ದಾಕ್ಷಣ ಈ ರೀತಿಯ ಹೇಳಿಕೆ ನೀಡುವುದೇ. ಇದು ಸರಿಯಲ್ಲ ಎಂದು ಚಾಟಿ ಬೀಸಿದರು.ಇದೇ ವೇಳೆ ಪ್ರಕರಣಕ್ಕೆ  ತಡೆ ನೀಡಲು ನಿರಾಕರಿಸಿದರು.‌

ಸ್ವತಃ ಯತ್ನಾಳ್ ಪರ ವಕೀಲ ಸಿ.ವಿ ನಾಗೇಶ್ ಅವರು ಯತ್ನಾಳ್ ಅವರ ಹೇಳಿಕೆಯನ್ನ ಸಮರ್ಥಿಸಲ್ಲ ಎಂದು ಕೋರ್ಟ್ ಮುಂದೆ ತಪ್ಪು ಒಪ್ಪಿಕೊಂಡರು.ಸಚಿವರ ಹೇಳಿಕೆಗೆ ಪ್ರತಿಯಾಗಿ ಯತ್ನಾಳ್ ಅವರು ಹೇಳಿಕೆ ನೀಡಿದ್ದಾರೆ.ಆದರೆ ಕುಟುಂಬ ನಿಂದಿಸುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ ಎಂದು ಯತ್ನಾಳ್ ಪರ ವಕೀಲರು  ನ್ಯಾಯಮೂರ್ತಿ ಅವರಿಗೆ ಸಮಜಾಯಿಶಿ ನೀಡಲು ಪ್ರಯತ್ನಿಸಿದರು. ಆದರೆ ಯತ್ನಾಳ್ ಪರ ವಕೀಲರ ವಾದವನ್ನ ಒಪ್ಪದ ಜಸ್ಟೀಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು.

ಇದನ್ನೂ ಓದಿ : ಕರ್ನಾಟಕ-ತಮಿಳುನಾಡು ಗಡಿಯಲ್ಲಿ 2 ತಾಸು ಟ್ರಾಫಿಕ್ ಜಾಂ; ವಾಹನ ಸವಾರರ ಪರದಾಟ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News