ಬೆಂಗಳೂರು: ಕೊರೋನಾ ಮತ್ತು ಓಮೈಕ್ರಾನ್ ಸಾಂಕ್ರಾಮಿಕ ಪ್ರಕರಣಗಳ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಪಾಠ-ಪ್ರವಚನಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಈಗ  ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ರಾಜ್ಯದ ಎಲ್ಲಾ ವಿ.ವಿ.ಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Karnataka Hijab row: "ಪ್ರತಿಭಟನೆ ಮುಂದುವರಿದರೆ ಕಠಿಣ ಕ್ರಮ"- ಗೃಹ ಸಚಿವರ ಎಚ್ಚರಿಕೆ


ಈ ಬಗ್ಗೆ ಬುಧವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕೆಲವು ವಿ.ವಿ.ಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು.ಆದರೆ, ಮೇಲೆ ಉಲ್ಲೇಖಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು. 


ಇದನ್ನೂ ಓದಿ: DK Shivakumar vs KS Eshwarappa: ಏಕವಚನದಲ್ಲಿ ಬೈದಾಡಿಕೊಂಡ ಡಿಕೆಶಿ ಮತ್ತು ಈಶ್ವರಪ್ಪ


ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ'ಎಂದು ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.