371 (ಜೆ) ಅಡಿ ನೇಮಕಾತಿ, ಮುಂಬಡ್ತಿ ಪ್ರಕ್ರಿಯೆಯಲ್ಲಿ ವಿಳಂಬ: ಸಚಿವ ಸಂಪುಟ ಉಪಸಮಿತಿ ಆಕ್ಷೇಪ-15 ದಿನಗಳಿಗೊಮ್ಮೆ ಸಭೆ

ಸಭೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸದಸ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಅರಣ್ಯ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್‌ ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

Written by - Prashobh Devanahalli | Last Updated : Mar 10, 2025, 07:03 PM IST
    • ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆ
    • ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಪುಟ ಉಪ ಸಮಿತಿ ಸಭೆ
    • ನೋಟಿಸ್‌ ಜಾರಿಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಯಿತು
371 (ಜೆ) ಅಡಿ ನೇಮಕಾತಿ, ಮುಂಬಡ್ತಿ ಪ್ರಕ್ರಿಯೆಯಲ್ಲಿ ವಿಳಂಬ: ಸಚಿವ ಸಂಪುಟ ಉಪಸಮಿತಿ ಆಕ್ಷೇಪ-15 ದಿನಗಳಿಗೊಮ್ಮೆ ಸಭೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಹುದ್ದೆಗಳ ನೇಮಕಾತಿ, ಮುಂಬಡ್ತಿ, ಜೇಷ್ಠತೆಯಲ್ಲಿ ಲೋಪದೋಷ ಮುಂತಾದ ಪ್ರಕ್ರಿಯೆಗಳು ಮಂದಗತಿಯಲ್ಲಿ ನಡೆಯುತ್ತಿರುವುದನ್ನು ತೀವ್ರವಾಗಿ ಆಕ್ಷೇಪಿಸಿದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶನೆ ಕುರಿತ ಸಂಪುಟ ಉಪ ಸಮಿತಿ ಪ್ರತಿ ಹದಿನೈದು ದಿನಗಳಿಗೊಮ್ಮೆ ಸಭೆ ಸೇರಿ ಸರ್ಕಾರದ ಐದು ಇಲಾಖೆಗಳ ವರದಿಯನ್ನು ಕುಲಂಕೂಶವಾಗಿ ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷ ಪ್ರಿಯಾಂಕ್‌ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ತೀರ್ಮಾನಿಸಿತು.

Add Zee News as a Preferred Source

ಇದನ್ನೂ ಓದಿ:  ನೌಕರರು ಮತ್ತು ಪಿಂಚಣಿದಾರರಿಗೆ ಶಾಕ್ : ಇನ್ನು ಮುಂದೆ ಲಭ್ಯವಿರುವುದಿಲ್ಲ ಪಿಂಚಣಿ, ಗ್ರಾಚ್ಯುಟಿ!ನಿಯಮಗಳಲ್ಲಿ ಬಹು ದೊಡ್ಡ ಬದಲಾವಣೆ

ಸಭೆಯಲ್ಲಿ ಸಚಿವ ಸಂಪುಟ ಉಪ ಸಮಿತಿಯ ಸದಸ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌, ಅರಣ್ಯ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್‌ ಭಾಗವಹಿಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯಸ್ಥರು ಸಭೆಗೆ ಬಾರದೆ ತಮ್ಮ ಪ್ರತಿನಿಧಿಗಳನ್ನು ಕಳುಹಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿದಲ್ಲದೆ, ಸಭೆಗೆ ಬರುವ ಕಿರಿಯ ಅಧಿಕಾರಿಗಳು ವಿಷಯವನ್ನು ತಿಳಿದುಕೊಳ್ಳದೆ ಅಭಾಸವನ್ನುಂಟು ಮಾಡುತ್ತಿರುವ ಬಗ್ಗೆ ಸಂಪುಟ ಉಪ ಸಮಿತಿಯು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿತು. ಮುಂದಿನ ಸಭೆಗಳಿಗೆ ಹಾಜರಾಗದ ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್‌ ಜಾರಿಗೊಳಿಸುವ ಮೂಲಕ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಯಿತು.

ಬೆಂಗಳೂರಿನ ಅಪೆಕ್ಸ್‌ ಬ್ಯಾಂಕ್‌ ನಿ. 371(ಜೆ) ಪಾಲಿಸದೇ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ವೃಂದದ ಅಧಿಕಾರಿಗಳು ಹಾಗೂ ನೌಕರರಿಗೆ ಮುಂಬಡ್ತಿ ಹಾಗೂ ಸೇವಾ ಜೇಷ್ಠತೆ ಪರಿಗಣಿಸಲು ಕಳೆದ ಸಭೆಯಲ್ಲಿ ಸೂಚನೆ ನೀಡಲಾಗಿದ್ದರೂ ಇಂದಿನ ಸಭೆಗೆ ಸಹಕಾರ ಇಲಾಖೆಯ ಯಾವುದೇ ಅಧಿಕಾರಿಗಳು ಬಾರದೆ ಗೈರು ಹಾಜರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಭೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸನ್ನುನೀಡಲು ನಿರ್ದೇಶಿಸಲಾಯಿತು.

ಕಳೆದ ಸಭೆಯಲ್ಲಿ ನಡೆದ ನಡಾವಳಿಗಳಿಗೆ ಸಂಬಂಧಿಸಿದಂತೆ ಅನುಪಾಲನ ವರದಿ ಸಲ್ಲಿಸದ ಒಳಾಡಳಿತ ಇಲಾಖೆ, ಅಬಕಾರಿ ಇಲಾಖೆ ಹಾಗೂ ಪೊಲೀಸ್‌ ವೈರ್‌ಲೆಸ್‌ ಘಟಕ ಇಲಾಖೆಗಳಿಗೂ ನೋಟೀಸ್‌ ಜಾರಿ ಮಾಡುವಂತೆ ತಿಳಿಸಲಾಯಿತು.

ಇದನ್ನೂ ಓದಿ:  ಈ ರಾಶಿಯವರು ಚಿನ್ನದ ಉಂಗುರ ಧರಿಸಿದರೆ ಸಾಕ್ಷಾತ್‌ ಮಹಾಲಕ್ಷ್ಮೀ ಕೈ ಹಿಡಿದಂತೆ; ಇದೇ ಬೆರಳಿಗೆ ಹಾಕಿದರಂತೂ ಐಶ್ವರ್ಯ, ಶಾಂತಿ, ಸಮೃದ್ಧಿ ಅರಸಿ ಬರುವುದು

ಮುಂದಿನ ಸಭೆಗೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರು ಹಾಜರಾಗುವುದರೊಂದಿಗೆ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಹುದ್ದೆಗಳ ನೇಮಕಾತಿ, ಮುಂಬಡ್ತಿ, ಜೇಷ್ಠತೆಯಲ್ಲಿ ಲೋಪದೋಷ ಪ್ರಕರಣಗಳಲ್ಲಿ ನ್ಯಾಯಾಲಯಗಳನ್ನು ಪ್ರತಿನಿಧಿಸುತ್ತಿರುವ ವಕೀಲರನ್ನು  ಆಹ್ವಾನಿಸಬೇಕೆಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News