ನವದೆಹಲಿ: ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತ್ರಿವಿಕ್ರಮ್‌ ಜೊತೆ ಭವ್ಯ ಮದುವೆ ಫಿಕ್ಸ್!? ಕೊನೆಗೂ ಉತ್ತರ ಕೊಟ್ರು ಬಿಗ್‌ಬಾಸ್‌ ರನ್ನರ್‌ಅಪ್!!‌


ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಮನವಿ ಮಾಡಿದ್ದಾರೆ.


ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ  ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.


https://www.mygov.in/group-poll/vote-your-favourite-tableau-and-marching-contingent-republic-day-parade-2025/ ಲಿಂಕ್‌ ಮೇಲೆ ಕ್ಲಿಕ್ ಮಾಡಿ, Login to participate  ಮೇಲೆ ಕ್ಲಿಕ್ ಮಾಡಿ. ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ. ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ  submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.


ಇದನ್ನೂ ಓದಿ: ತನಗಿಂತ 33 ವರ್ಷ ಹಿರಿಯ ನಟನ ಜೊತೆ ರೋಮ್ಯಾನ್ಸ್ ಮಾಡಲಿರುವ ಈ ಮಾದಕ ಬೆಡಗಿ! ಅವಕಾಶಕ್ಕಾಗಿ ಈ ಅವಾಂತರವೇ?


ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ್‌ ಮಾಡಬಹುದಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.